ಫ್ಲೆಕ್ಸ್ ವಿಚಾರಕ್ಕೆ ಜಗಳ: ಯುವಕನ ಕೊಲೆ

Fight between two gangs: young man murdered

27-03-2018

ಬೆಂಗಳೂರು: ನಗರದ ಹೊರವಲಯದ ನೆಲಮಂಗಲದ ರೈಲ್ವೆ ಗೊಲ್ಲಹಳ್ಳಿ ಗೇಟ್ ಬಳಿ ನಿನ್ನೆ ರಾತ್ರಿ ಫ್ಲೆಕ್ಸ್ ಕಟ್ಟುವ ವಿಚಾರದಲ್ಲಿ ನಡೆದ ಯುವಕರ ಜಗಳ ವಿಕೋಪಕ್ಕೆ ತಿರುಗಿ ಓರ್ವನ ಕೊಲೆಯಲ್ಲಿ ಅಂತ್ಯವಾಗಿರುವ ದುರ್ಘಟನೆ ನಡೆದಿದೆ.

ಕೊಲೆಯಾದ ಯುವಕನನ್ನು ಗೊಲ್ಲಹಳ್ಳಿ ಗೇಟ್ ನ ಮಾರುತಿ ಬಡಾವಣೆಯ ಮಾರುತಿ (25) ಎಂದು ಗುರುತಿಸಲಾಗಿದೆ. ಗೊಲ್ಲಹಳ್ಳಿಯಲ್ಲಿ ಬಯಲಾಂಜನೇಯ ಸ್ವಾಮಿಯ ಜಾತ್ರೆಯ ಅಂಗವಾಗಿ ನಿನ್ನೆ ರಥೋತ್ಸವವನ್ನ ಹಮ್ಮಿಕೊಳ್ಳಲಾಗಿತ್ತು.

ರಥೋತ್ಸವದ ಹಿನ್ನೆಲೆಯಲ್ಲಿ ಸ್ಥಳೀಯ ಯುವಕರು ಸಿದ್ಧತೆಯಲ್ಲಿ ತೊಡಗಿಕೊಂಡಿದ್ದು ದೇವಾಲಯದ ಮುಂಭಾಗ ಹಾಗೂ ಗ್ರಾಮದಲ್ಲಿ ಫ್ಲೆಕ್ಸ್ ಕಟ್ಟುವ ವಿಚಾರದಲ್ಲಿ ಎರಡು ಗುಂಪುಗಳ ಮಧ್ಯೆ ನಡೆದ ಗಲಾಟೆ ತಾರಕ್ಕೇರಿ ಮಾರುತಿಗೆ ಚಾಕುವಿನಿಂದ ಇರಿಯಲಾಗಿದ್ದು ರಕ್ತದ ಮಡುವಿನಲ್ಲಿ ಬಿದ್ದು ಅಸ್ವಸ್ಥನಾದ ಆತನನ್ನು ಕೂಡಲೇ ಆಸ್ಪತ್ರೆಗೆ ಕರೆದೊಯ್ಯಲಾಯಿತಾದರೂ ಮಾರ್ಗ ಮಧ್ಯೆ ಮೃತಪಟ್ಟಿದ್ದಾನೆ.

ಘಟನೆಯಲ್ಲಿ ಮಾರುತಿ ಜೊತೆಯಲ್ಲಿದ್ದ ಶಶಿಕುಮಾರ್ ಎಂಬ ಯುವಕನ ಮೇಲೂ ಹಲ್ಲೆ ನಡೆದಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಆತ ಪ್ರಾಣಾಪಾಯದಿಂದ ಪಾರಾಗಿದ್ದಾನೆ.ಈ ದುರ್ಘಟನೆಯ ಹಿನ್ನಲೆಯಲ್ಲಿ ಗ್ರಾಮದಲ್ಲಿ ಬಿಗುವಿನ ವಾತಾವರಣ ಉಂಟಾಗಿದೆ. ನೆಲಮಂಗಲದ ಬೋನ್ ಮಿಲ್ ನಿವಾಸಿಗಳಾದ ರವಿ ಮತ್ತು ಆತನ ಸಹಚರರು ಕೃತ್ಯ ನಡೆಸಿದ್ದಾರೆ ಎಂದು ಶಂಕಿಸಲಾಗಿದೆ. ನೆಲಮಂಗಲ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

Murder Flex ಗ್ರಾಮಾಂತರ ದುರ್ಘಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ