ಅಕ್ರಮ ಕಲ್ಲುಗಣಿಗಾರಿಕೆ: ಅಪಾರ ಪ್ರಮಾಣದ ಸ್ಪೋಟಕ ವಶ

Illegal quarrying: large quantities of explosives seized

27-03-2018

ಬೆಂಗಳೂರು: ನಗರದ ಹೊರವಲಯದ ಬ್ಯಾಡರಹಳ್ಳಿ ಸುತ್ತಮುತ್ತಲಿನ ಅಕ್ರಮ ಕಲ್ಲುಗಣಿಗಾರಿಕೆ ಮೇಲೆ ದಾಳಿ ನಡೆಸಿ, ಇಬ್ಬರನ್ನು ಬಂಧಿಸಿ 25 ಲಕ್ಷಕ್ಕೂ ಹೆಚ್ಚು ಮೌಲ್ಯದ ಸ್ಫೋಟಕಗಳನ್ನು ವಶಪಡಿಸಿಕೊಳ್ಳುವಲ್ಲಿ ಬೆಂಗಳೂರು ಗ್ರಾಮಾಂತರ ಪೊಲೀಸರು ಯಶಸ್ವಿಯಾಗಿದ್ದಾರೆ. ವಿದ್ಯಾನಗರದ ಬಾಬು (30) ಹಾಗೂ ತಮಿಳುನಾಡಿನ ಧರ್ಮಪುರಿ ಮೂಲದ ಮುರುಗ(38) ಬಂಧಿತ ಆರೋಪಿಗಳಾಗಿದ್ದಾರೆ, ಕೃತ್ಯದಲ್ಲಿ ಭಾಗಿಯಾಗಿರುವ ಇನ್ನೂ ಮೂವರು ಆರೋಪಿಗಳಿಗಾಗಿ ತೀವ್ರ ಶೋಧ ನಡೆಸಲಾಗಿದೆ.

ಅಕ್ರಮವಾಗಿ ಸ್ಫೋಟಕಗಳನ್ನು ಬಳಸಿ ಕಲ್ಲುಗಣಿಗಾರಿಕೆ ನಡೆಸಲಾಗುತ್ತಿದ್ದ ಖಚಿತ ಮಾಹಿತಿ ಆಧರಿಸಿ ದೇವನಹಳ್ಳಿಯ ಮುದ್ದುನಾಯಕನಹಳ್ಳಿ ಮತ್ತು ಬ್ಯಾಡರಹಳ್ಳಿ ಸುತ್ತಮುತ್ತಲಿನ ಕ್ರಷರ್‍ಗಳ ಮೇಲೆ ದಾಳಿ ನಡೆಸಿ 6 ಲಕ್ಷ ಬೆಲೆಯ ಸ್ಫೋಟಕಗಳು 18 ಲಕ್ಷ ಮೌಲ್ಯದ ಲೈಲ್ಯಾಂಡ್ ವಾಹನಗಳು ಸೇರಿ 25 ಲಕ್ಷಕ್ಕೂ ಹೆಚ್ಚು ಮೌಲ್ಯದ ಮಾಲುಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಗ್ರಾಮಾತರ ಎಸ್‍ಪಿ ಭೀಮಾಶಂಕರ ಗುಳೇದ್ ತಿಳಿಸಿದ್ದಾರೆ.  ಸ್ಫೋಟಕಗಳನ್ನ ಬಳಸಿ ಕಲ್ಲು ಗಣಿಗಾರಿಕೆ ನಡೆಸುತ್ತಿದ್ದ ಮಂಜುನಾಥ್ ಕ್ರಷರ್, ಎಸ್.ಕೆ.ಕ್ರಷರ್, ಶ್ರೀರಾಮ್ ಕ್ರಷರ್, ಆಂಜನೇಯ ಕ್ರಷರ್ ಮೇಲೆ ದಾಳಿ ನಡೆಸಲಾಗಿದೆ. ಈ ಸಂಬಂಧ ವಿಶ್ವನಾಥಪುರ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

illegal maining explosive ಟಿಪ್ಪರ್ ತಮಿಳುನಾಡು


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ