ಗೋಕಾಕನಲ್ಲಿ ಅಮಿತ್ ಷಾ ರೋಡ್ ಶೋ

Amit shah road show at gokak in belgaum

29-03-2018

ಬೆಳಗಾವಿ: ರಾಜ್ಯ ವಿಧಾನಸಭೆಗೆ ಚುನಾವಣಾ ದಿನಾಂಕ ಪ್ರಕಟವಾದ ಬೆನ್ನಲ್ಲೇ ರಾಜಕೀಯ ಚಟುವಟಿಕೆಗಳು ಬಿರುಸುಗೊಂಡಿವೆ. ಎಲ್ಲ ರಾಜಕೀಯ ಪಕ್ಷಗಳು ಭರದ ಪ್ರಚಾರದಲ್ಲಿ ತೊಡಗಿವೆ. ಕಳೆದೆರಡು ದಿನಗಳ ಹಿಂದಷ್ಟೇ ರಾಜ್ಯದಲ್ಲಿ ಪ್ರವಾಸ ಮಾಡಿದ್ದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಅವರ ಮುಂಬೈ ಕರ್ನಾಟಕ ಪ್ರವಾಸ ಫಿಕ್ಸ್ ಆಗಿದೆ. ಮುಂದಿನ ತಿಂಗಳು ಏಪ್ರಿಲ್ 2 ಮತ್ತು 3ರಂದು ಅಮಿತ್ ಷಾ ಮತ್ತೊಮ್ಮೆ ಪ್ರವಾಸ ಕೈಗೊಂಡಿದ್ದಾರೆ. ಏಪ್ರಿಲ್ 1ರಂದು ದೆಹಲಿಯಿಂದ ನೇರವಾಗಿ ಬೆಳಗಾವಿಯ ಸಾಂಬ್ರಾ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದು, ಬೆಳಗಾವಿಯ ಸರ್ಕ್ಯೂಟ್ ಹೌಸ್ ನಲ್ಲಿ ವಾಸ್ತವ್ಯ ಹೂಡಲಿದ್ದಾರೆ. ಏಪ್ರಿಲ್ 2ರಂದು ಕಿತ್ತೂರಿನಲ್ಲಿ ರಾಣಿ ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆ ಮಾಡಿ ನಂತರ ಖಾನಾಪುರ ತಾಲ್ಲೂಕಿನ ನಂದಗಡದಲ್ಲಿ ಸಂಗೊಳ್ಳಿ ರಾಯಣ್ಣ ಸಮಾಧಿಗೆ ಗೌರವ ಸಲ್ಲಿಸಲಿದ್ದಾರೆ. ಅದಲ್ಲದೇ ಬೆಳಗಾವಿಯಲ್ಲಿ ಕಾಲೇಜು ವಿದ್ಯಾರ್ಥಿಗಳು, ನಿಪ್ಪಾಣಿಯಲ್ಲಿ ಮಹಿಳೆಯರು ಜೊತೆಗೆ ಸಂವಾದ ನಡೆಸಲಿದ್ದಾರೆ ಹಾಗು ಗೋಕಾಕನಲ್ಲಿ ರೋಡ್ ಶೋ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ