‘ರಾಜ್ಯಕ್ಕೆ 2 ರಾಷ್ಟ್ರೀಯ ಪಕ್ಷಗಳಿಂದ ಪೆಟ್ಟು ಬಿದ್ದಿದೆ’-ಹೆಚ್ಡಿಡಿ

on 2nd april jds huge confere at hassan

29-03-2018

ಹಾಸನ: ಕಾವೇರಿ ನೀರು ಹಂಚಿಕೆ ವಿವಾದದ ಕುರಿತು, ನೀರು ನಿರ್ವಹಣಾ ಮಂಡಳಿ ರಚನೆಗೆ ಲೋಕಸಭೆಯಲ್ಲಿ ತಮಿಳುನಾಡು ಹೋರಾಟ ಹಿನ್ನೆಲೆ, ಯಾರೂ ಉದ್ರೇಕಕ್ಕೆ ಒಳಗಾಗಬಾರದು ಎಂದು ಹಾಸನದಲ್ಲಿ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಮನವಿ ಮಾಡಿದ್ದಾರೆ.

ಈಗಾಗಲೆ ಒಮ್ಮೆಗೇ ಸುಪ್ರೀಂ ಆದೇಶ ಜಾರಿ ಕಷ್ಷ ಎಂದು ಕೇಂದ್ರ ಸರ್ಕಾರ ಹೇಳಿದೆ. ಆದರೂ ತಮಿಳುನಾಡಿನ ಮಿತ್ರರು ಉಗ್ರ ಹೋರಾಟಕ್ಕೆ ಮುಂದಾಗಿದ್ದಾರೆ. ಒಬ್ಬ ಸಂಸದರು ಆತ್ಮಹತ್ಯೆ ಮಾಡಿಕೊಳ್ಳುವ ಬೆದರಿಕೆ ಸಹ ಹಾಕಿದ್ದಾರೆ. ಒಂದು ರಾಜ್ಯ ಹೀಗೆ ಹಠ ಹಿಡಿಯುವುದು ಸರಿಯಲ್ಲ, ಸೌಹಾರ್ದಯುತವಾಗಿ ಸಮಸ್ಯೆ ಬಗೆ ಹರಿಸಿಕೊಳ್ಳಬೇಕು. ಕೇಂದ್ರದವರು ಮತ್ತೇ ಸುಪ್ರೀಂ ಅಭಿಪ್ರಾಯ ಕೇಳುವುದಾಗಿ ಹೇಳಿದ್ದಾರೆ.

ಮೊದಲು ಕೇಂದ್ರ‌ ಜಲಸಂಪನ್ಮೂಲ ಸಚಿವರ ಅಧ್ಯಕ್ಷತೆಯಲ್ಲಿ 4ರಾಜ್ಯಗಳ ಸಿಎಂ ಒಳಗೊಂಡ ಕಮಿಟಿ ಮಾಡಲಿ. ಅಲ್ಲಿ‌ ನೀರಿನ‌ ಸ್ಥಿತಿಗತಿ ಅಧ್ಯಯನ ಮಾಡುವ ತಜ್ಞರೂ ಇರಲಿ. ಅದರ‌ 5ವರ್ಷಗಳ ಚಟುವಟಿಕೆ ನೋಡೋಣ, ಸಾಧಕ ಬಾಧಕ ನೋಡಿ ನಂತರ ಮುಂದಿನ ನಿರ್ಧಾರಕ್ಕೆ ಬರಲಿ. ಅದಕ್ಕೂ ಮುನ್ನ ಸಾಯುವ ಹೇಳಿಕೆ ‌ನೀಡಬಾರದು ಎಂದು ಅಭಿಪ್ರಾಯಪಟ್ಟರು. ಈ‌ ಸಂಬಂಧ ಕೇಂದ್ರ ಜಲಸಂಪನ್ಮೂಲ ಸಚಿವರ ಜೊತೆ ಮಾತಾಡುವೆ ಎಂದಿದ್ದಾರೆ.

ಇನ್ನು ದೇಶದಲ್ಲಿ ಜಾತ್ಯತೀತ ಶಕ್ತಿಗಳು ಒಂದಾಗುವ ವಿಚಾರಕ್ಕೆ ಪ್ರತಿಕ್ರಿಯಿಸಿ, ಅನೇಕ ನಾಯಕರು ಈ ಬಗ್ಗೆ ಮಾತನಾಡಿದ್ದಾರೆ. ನನ್ನದು ಅಸಹಕಾರ ಅಲ್ಲ, ಸದ್ಯಕ್ಕೆ ನಾನು ಒಕ್ಕೂಟ ಸೇರಲ್ಲ. ಕರ್ನಾಟಕ ಚುನಾವಣೆ ಮುಗಿಯುವವರೆಗೆ ನಾನು‌ ಈ ಬಗ್ಗೆ ಮಾತನಾಡಲ್ಲ. ನನ್ನ ರಾಜ್ಯಕ್ಕೆ 2ರಾಷ್ಟ್ರೀಯ ಪಕ್ಷಗಳಿಂದ ಪೆಟ್ಟು ಬಿದ್ದಿದೆ. ಇವರಿಬ್ಬರ ವಿರುದ್ಧ ನಾನು ಹೋರಾಡಬೇಕಿದೆ. ಚುನಾವಣೆ ಬಂದಾಗ ಅಡಿಕೆ ಸಮಸ್ಯೆ ಮಾತನಾಡುವವರು ಇಲ್ಲಿವರೆಗೆ ಏನು ಮಾಡುತ್ತಿದ್ದರು ಎಂದು ಪ್ರಶ್ನಿಸಿದ್ದಾರೆ. ಜನ ಎಲ್ಲವನ್ನೂ ಅರ್ಥ ಮಾಡಿಕೊಳ್ಳುತ್ತಾರೆ ಎಂದರು.

ಬಿಎಸ್ಪಿ ಮುಖ್ಯಸ್ಥೆ ಮಾಯಾವತಿ ರಾಜ್ಯದ 3ಕಡೆ ಚುನಾವಣಾ ಪ್ರಚಾರಕ್ಕೆ ಬರುತ್ತಾರೆ. ಮುಂಬೈ, ಹೈದರಾಬಾದ್ ಕರ್ನಾಟಕ ಮತ್ತು ಹಳೇ ಮೈಸೂರು ಭಾಗದಲ್ಲಿ ಸಮಾವೇಶ ನಡೆಯಲಿವೆ. ಏಪ್ರಿಲ್ 2ರಂದು ಹಾಸನದಲ್ಲಿ ಬೃಹತ್ ಸಮಾವೇಶ ನಡೆಯಲಿದ್ದು, ಒಂದು ಲಕ್ಷಕ್ಕೂ ಅಧಿಕ ಜನ‌ ಸೇರುವ ವಿಶ್ವಾಸವಿದೆ ಎಂದಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

H.D.Deve Gowda Central governmen ಬೃಹತ್ ಸಮಾವೇಶ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ