ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಘರ್ಷಣೆ

Conflict between villagers and police

30-03-2018

ಚಿತ್ರದುರ್ಗ: ನಾಟಕ ವೀಕ್ಷಣೆ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಘರ್ಷಣೆ ನಡೆದಿದೆ. ಜಿಲ್ಲೆಯ ಹಿರಿಯೂರು ತಾಲ್ಲೂಕಿನ ಖಂಡೇನಹಳ್ಳಿಯಲ್ಲಿ ಶನೇಶ್ವರ ಜಾತ್ರೆ ಅಂಗವಾಗಿ ನಾಟಕ ಪ್ರದರ್ಶನ ಆಯೋಜಿಸಲಾಗಿದ್ದು, ಕೆಲ ಕಿಡಿಗೇಡಿಗಳು ಅನುಚಿತ ವರ್ತನೆ ತೋರಿದ್ದಾರೆ. ಸ್ಥಳದಲ್ಲೇ ಇದ್ದ ಪೊಲೀಸರು ಕ್ರಮಕ್ಕೆ ಮುಂದಾಗಿದ್ದು ಈ ವೇಳೆ ಪೊಲೀಸರು ಮತ್ತು ಗ್ರಾಮಸ್ಥರ ನಡುವೆ ಘರ್ಷಣೆಯಾಗಿದೆ. ಘಟನೆಯಲ್ಲಿ ನಾಲ್ವರು ಪೊಲೀಸರು, ಕಂಡೇನಹಳ್ಳಿಯ ಸತೀಶ ಸೇರಿದಂತೆ  ಹಲವರಿಗೆ ಗಾಯಗಳಾಗಿವೆ. ಗ್ರಾಮಸ್ಥರು ಪೊಲೀಸರ ಮೇಲೆ ಕಲ್ಲು ತೂರಾಟ ನಡೆಸಿದ್ದಾರೆ ಎಂದು ತಿಳಿದು ಬಂದಿದೆ. ಆದರೆ ಪೊಲೀಸರ ವಿರುದ್ಧ ಗ್ರಾಮಸ್ಥರು ದೌರ್ಜನ್ಯ ಆರೋಪ ಮಾಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Police Drama ಗ್ರಾಮಸ್ಥರು ದೌರ್ಜನ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ