‘ಗುತ್ತೇದಾರ್ ತಾವಾಗಿಯೇ ಬಿಜೆಪಿಗೆ ಬರುತ್ತಿದ್ದಾರೆ’

Malikayya Guttedar joins to BJP:

30-03-2018

ಕಲಬುರಗಿ: ಕಾಂಗ್ರೆಸ್ ಶಾಸಕ ಮಾಲೀಕಯ್ಯ ಗುತ್ತೇದಾರ್ ಬಿಜೆಪಿಗೆ ಸೇರುತ್ತಿರುವ ವಿಚಾರದ ಕುರಿತು ಪ್ರತಿಕ್ರಿಯಿಸಿದ ವಿಧಾನ ಪರಿಷತ್ನ ವಿಪಕ್ಷ ನಾಯಕ ಕೆ.ಎಸ್.ಈಶ್ವರಪ್ಪ, ಗುತ್ತೇದಾರ್ ಅವರು ತಾವಾಗಿಯೇ ಬಿಜೆಪಿ ಸೇರ್ಪಡೆಯಾಗುತ್ತಿದ್ದಾರೆ. ಅವರಿಗೆ ಟಿಕೆಟ್ ನೀಡುತ್ತೇವೆ ಅಂತಾ ಯಾವುದೇ ಭರವಸೆ ನೀಡಿಲ್ಲ ಎಂದು ಹೇಳಿದ್ದಾರೆ.

ಕಲಬುರಗಿಯಲ್ಲಿ ಮಾಧ್ಯಮದವರ ಪ್ರಶ್ನೆಗಳಿಗೆ ಉತ್ತರಿಸಿದ ಅವರು, ಗುತ್ತೇದಾರ್‌ರನ್ನ ನಿವೇ ಪಕ್ಷಕ್ಕೆ ಆಹ್ವಾನಿಸಿದ್ದೀರಾ ಅಥವಾ ಅವರಾಗಿಯೇ ಬರುತ್ತಿದ್ದಾರಾ ಎಂಬ ಮಾಧ್ಯಮಗಳ ಪ್ರಶ್ನೆಗೆ, ಪ್ರೀತಿ ಎಡಗಡೆ ಹುಟ್ಟುತ್ತಾ ಅಥಾವ ಬಲಗಡೆ ಹುಟ್ಟುತ್ತಾ? ಪ್ರೀತಿ ಹುಡುಗನ ಕಡೆಯಿಂದ ಹುಟ್ಟುತ್ತಾ ಅಥಾವ ಹುಡುಗಿ ಕಡೆಯಿಂದ ಹುಟ್ಟುತ್ತಾ ಅಂತಾ ಈಶ್ವರಪ್ಪ ಮರುಪ್ರಶ್ನೆ ಹಾಕಿದರು. ಪ್ರೀತಿ ಎಲ್ಲಿಂದಲೇ ಹುಟ್ಟಲಿ ಮತ್ತು ಯಾರಿಂದಲೇ ಹುಟ್ಟಲಿ, ಪ್ರೀತಿ ಮುಖ್ಯ ಎಂದು ಮಾಧ್ಯಮಗಳ ಪ್ರಶ್ನೆಗೆ ಈಶ್ವರಪ್ಪ ಉತ್ತರಿಸಿದ್ದಾರೆ.

ರಾಜ್ಯದ 224 ಕ್ಷೇತ್ರಗಳ ಟಿಕೆಟ್ ಇನ್ನೂ ಫೈನಲ್ ಆಗಿಲ್ಲ, ಟಿಕೆಟ್ ಫೈನಲ್ ಅಂತಾ ಕೇವಲ ಮಾಧ್ಯಮಗಳಲ್ಲಿ ಬರುತ್ತಿದೆ, ಅಭ್ಯರ್ಥಿಗಳ ಆಯ್ಕೆಗೆ ಕೇಂದ್ರ ಸಮಿತಿ ಮೂರು ಅಂಶದ ಸೂತ್ರ ರಚಿಸಿದೆ ಎಂದು ತಿಳಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ