ಬಿಜೆಪಿ ಮುಖಂಡನ ಹತ್ಯೆಗೆ ಸ್ಕೆಚ್: ಮೂವರ ಬಂಧನ

Sketch for BJP leader

30-03-2018

ಮಂಗಳೂರು: ಕರಾವಳಿ ಭಾಗದ ಬಿಜೆಪಿ ನಾಯಕನ ಹತ್ಯೆಗೆ ಸ್ಕೆಚ್ ಹಾಕಿದ್ದ ಗ್ಯಾಂಗ್ ಅನ್ನು ರೌಡಿ ನಿಗ್ರಹ ದಳದ ಪೊಲೀಸರು ಬಂಧಿಸಿದ್ದಾರೆ. ಮೂಡಬಿದಿರೆ ವಿಧಾನಸಭಾ ಕ್ಷೇತ್ರದ ಬಿಜೆಪಿ ಟಿಕೆಟ್ ಅಕಾಂಕ್ಷಿಯಾಗಿದ್ದ, ಬಿಜೆಪಿ ಮುಖಂಡ ಈಶ್ವರ್ ಕಟೀಲ್ ಹತ್ಯೆಗೆ ಸ್ಕೆಚ್ ಹಾಕಿದ್ದ ತಂಡ ಈಗ ಪೊಲೀಸರ ವಶದಲ್ಲಿದೆ. ದಕ್ಷಿಣ ಕನ್ನಡ ಜಿಲ್ಲೆಯ ಕಿನ್ನಿಗೋಳಿ ಬಳಿ ಆರೋಪಿಗಳನ್ನು ಬಂಧಿಸಿದ್ದಾರೆ. ಪೊಲೀಸರು ದಾಳಿ ಮಾಡುತ್ತಿದ್ದಂತೆ ಗ್ಯಾಂಗ್ನ ಮೂವರು ಪರಾರಿಯಾಗಿದ್ದಾರೆ. ಬಂಧಿತರು ಉಳಾಯಿ ಬೆಟ್ಟುವಿನ ಪ್ರದೀಪ ಪೂಜಾರಿ, ಬಂಟ್ವಾಳದ ದಿನೇಶ್ ಬೆಲ್ಚಡ, ಮುಲ್ಕಿಯ ಶಿವ ಪ್ರಸಾದ್ ಎಂದು ಗುರುತಿಸಲಾಗಿದೆ. ಕಿನ್ನಿಗೋಳಿ ಸಮೀಪದ ಬಟ್ಟಕೋಡಿ ಶಿಬರೂರು ಬಳಿ ಕಾರಿನಲ್ಲಿ ಮಾರಕಾಸ್ತ್ರಗಳನ್ನಿಟ್ಟುಕೊಂಡು ಹೊಂಚು ಹಾಕಿದ್ದ ಗ್ಯಾಂಗ್ ಅನ್ನು ಪೊಲೀಸರು ಬಂಧಿಸಿ ಕ್ರಮ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ