ಸಿಲಿಂಡರ್ ಸ್ಟೋಟದಿಂದ ಹೊತ್ತಿ ಉರಿದ ಮನೆ

cylinder blast at home: family members escaped

31-03-2018

ಬೆಳಗಾವಿ: ಗ್ಯಾಸ್ ಸಿಲಿಂಡರ್ ಸ್ಫೋಟದಿಂದ ಮನೆ ಛಿದ್ರವಾಗಿರುವ ಘಟನೆ ಜಿಲ್ಲೆಯ ಹುಕ್ಕೇರಿ ತಾಲ್ಲೂಕಿನ ಬಡಕುಂದ್ರಿ ಗ್ರಾಮದಲ್ಲಿ ನಡೆದಿದೆ. ಗ್ರಾಮದ ರಶ್ಮೀಕಾ ಯಮನಪ್ಪ ಚೌಗಲಾ ಎಂಬುವವರ ಮನೆಯಲ್ಲಿ ಸಿಲಿಂಡ್ ಸ್ಫೋಟಗೊಂಡಿದ್ದು, ಮನೆಯಲ್ಲಿದ್ದ ವಸ್ತುಗಳು ಬಹುತೇಕ ವಸ್ತುಗಳು ಸುಟ್ಟು ಕರಕಲಾಗಿವೆ. ಅದೃಷ್ಟವಶಾತ್ ಮನೆಯಲ್ಲಿ ಯಾರು ಇಲ್ಲದ್ದರಿಂದ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಗ್ಯಾಸ ಹೊತ್ತಿಸಿ ಹೊರಗಡೆ ಕೆಲಸ ಮಾಡುವ ವೇಳೆ ಘಟನೆ ನಡೆದಿದೆ. ಸ್ಪೋಟದಿದಿಂದ ಮನೆಗೆ ಬೆಂಕಿ ಆವರಿಸುತ್ತಿದ್ದಂತೆ ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ದೌಡಾಯಿಸಿ, ಬೆಂಕಿ ನಂದಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

cylinder LPG ಅಗ್ನಿಶಾಮಕ ದಳ ಪ್ರಾಣಾಪಾಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ