ಏಪ್ರಿಲ್ 8ರಂದು ಕಾಂಗ್ರೆಸ್ ಬೃಹತ್ ಸಮಾವೇಶ

Huge convention of Congress on April 8th at bengaluru

31-03-2018

ಬೆಂಗಳೂರು: ಮುಂದಿನ ತಿಂಗಳು ಏಪ್ರಿಲ್ 8ರಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯ ಪ್ರವಾಸ ಹಿನ್ನೆಲೆ, ಬೆಂಗಳೂರಿ‌ನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದ್ದು, ಈ ಕುರಿತು  ಚರ್ಚಿಸಲು ಕೆಪಿಸಿಸಿ ಅಧ್ಯಕ್ಷ ಜಿ. ಪರಮೇಶ್ವರ್ ಕಾಂಗ್ರೆಸ್ ಮುಖಂಡರ ಸಭೆ ಕರೆದಿದ್ದಾರೆ. ಸಭೆಗೆ ಬೆಂಗಳೂರು ನಗರದ ಸಚಿವರು, ಶಾಸಕರು, ನಗರ, ಕೇಂದ್ರ, ಗ್ರಾಮಾಂತರದ ಜಿಲ್ಲಾಧ್ಯಾಕ್ಷರುಗಳು, ಹಾಗು ಬ್ಲಾಕ್ ಅಧ್ಯಕ್ಷರು, ಕಾರ್ಪೋರೇಟರ್ಗಳೂ ಭಾಗಿಯಾಗಲಿದ್ದಾರೆ. ಸಮಾವೇಶಕ್ಕೆ 3ಲಕ್ಷ ಜನ ಸೇರಿಸುವ ಗುರಿ ಹೊಂದಿದ್ದು, ಈ ಹಿನ್ನೆಲೆಯಲ್ಲಿ ಇಂದಿನ ಸಭೆಯಲ್ಲಿ‌ ಮಹತ್ವದ ಚರ್ಚೆಗಳು ನಡೆಯಲಿವೆ. ಕಾರ್ಯಕರ್ತರನ್ನು ಕರೆತರುವ ಜವಾಬ್ದಾರಿಯನ್ನು ಪರಮೇಶ್ವರ್ ಅವರು ಎಲ್ಲಾ ಶಾಸಕರು, ಕಾರ್ಪೋರೇಟರ್ ಗಳಿಗೂ ನೀಡಲಿದ್ದಾರೆ ಎಂದು ತಿಳಿದು ಬಂದಿದೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ