ಆಂಜನೇಯ ದೇವಾಲಯಕ್ಕೆ ಷಾ ದಿಢೀರ್ ಭೇಟಿ

amit shah visited kote anjaneya swamy temple in mysore

31-03-2018

ಮೈಸೂರು: ಮೈಸೂರಿನ ಕೋಟೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಬಿಜೆಪಿ ರಾಷ್ಟ್ರಾಧ್ಯಕ್ಷ ಅಮಿತ್ ಷಾ ದಿಢೀರ್ ಭೇಟಿ ನೀಡಿದರು. ಹನುಮ ಜಯಂತಿ ಪ್ರಯುಕ್ತ ಮೈಸೂರು ಅರಮನೆ ಮುಂಭಾಗದಲ್ಲಿರುವ ಕೋಟೆ ಆಂಜನೇಯ ಸ್ವಾಮಿ ದೇವಾಲಯಕ್ಕೆ ಭೇಟಿ ನೀಡಿ ದರ್ಶನ ಪಡೆದರು, ಬಳಿಕ ಮಾಧ್ಯಮಗಳ ಪ್ರಶ್ನೆಗೆ ಪ್ರತಿಕ್ರಿಯಿಸಿದ ಅವರು ನಾನು ಪ್ರತಿ ಶನಿವಾರ ಆಂಜನೇಯ ದೇವಾಲಯಕ್ಕೆ ಹೋಗುತ್ತಿದ್ದೆ ಅದರಂತೆ ಇಲ್ಲಿಯೂ ಭೇಟಿ ನೀಡಿದ್ದೇನೆ. ಅದರಲ್ಲಿ ವಿಶೇಷವೇನೂ ಇಲ್ಲ ಎಂದರು. ಷಾ ಅವರ ಜೊತೆ ಕೇಂದ್ರ ಸಚಿವ ಅನಂತ್ ಕುಮಾರ್, ಸಂಸದ ಪ್ರತಾಪ್ ಸಿಂಹ ಮತ್ತಿತರರು ಉಪಸ್ಥಿತರಿದ್ದರು.

ಇದಕ್ಕೂ ಮೊದಲು ಆತ್ಮಹತ್ಯೆ ಮಾಡಿಕೊಂಡಿದ್ದ ಶ್ರೀರಂಗಪಟ್ಟಣ ತಾಲ್ಲೂಕಿನ ಚಿನ್ನೇನಹಳ್ಳಿ ಗ್ರಾಮದ ರೈತ ರಾಜೇಂದ್ರಪ್ಪ ಮನೆಗೆ ಭೇಟಿ ನೀಡಿ, ರಾಜೇಂದ್ರಪ್ಪನ ಪತ್ನಿ ಮತ್ತು ಪುತ್ರನಿಗೆ ಸಾಂತ್ವನ ಹೇಳಿ ಧೈರ್ಯ ತುಂಬಿದ್ದಾರೆ. 2015ರ ಜೂನ್ 18ರಂದು ರೈತ ರಾಜೇಂದ್ರಪ್ಪ ಆತ್ಮಹತ್ಯೆ ಮಾಡಿಕೊಂಡಿದ್ದರು.


ಸಂಬಂಧಿತ ಟ್ಯಾಗ್ಗಳು

Hunuman temple amit shah ಪ್ರತಾಪ್ ಸಿಂಹ ದೇವಾಲಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ