ಅಮಿತ್ ಷಾ ರಾಜ್ಯ ಪ್ರವಾಸ ದಿಢೀರ್ ಮುಂದೂಡಿಕೆ

Karnataka election: Amit Shah State Tour Postponed

02-04-2018

ಬೆಂಗಳೂರು: ಬಿಜೆಪಿ ರಾಷ್ಟೀಯ ಅಧ್ಯಕ್ಷ ಅಮಿತ್ ಷಾ ತಮ್ಮ ಪೂರ್ವ ನಿಯೋಜಿತ ಮುಂಬೈ ಕರ್ನಾಟಕ ಪ್ರವಾಸವನ್ನು ದಿಢೀರ್ ಮುಂದೂಡಿ ದೆಹಲಿಗೆ ವಾಪಸ್ ಆಗಿದ್ದಾರೆ. ರಾಜ್ಯಸಭಾ ಸದಸ್ಯರು, ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಾಧೀಶ ದೀಪಕ್ ಮಿಶ್ರ ವಿರುದ್ಧ ಕಾಂಗ್ರೆಸ್ ನೇತೃತ್ವದಲ್ಲಿ ಪ್ರತಿಪಕ್ಷಗಳು ಇಂದು ಸಂಸತ್ತಿನಲ್ಲಿ ಮಹಾಭಿಯೋಗವನ್ನು ಮಂಡಿಸುತ್ತಿವೆ. ಮಹಾಭಿಯೋಗವನ್ನು ಲೋಕಸಭೆ ಹಾಗೂ ರಾಜ್ಯಸಭೆಯಲ್ಲಿ ಮತಕ್ಕೆ ಹಾಕಲಾಗುತ್ತದೆ. ರಾಜ್ಯಸಭೆಯಲ್ಲಿ ಆಡಳಿತಾರೂಡ ಬಿಜೆಪಿ ನೇತೃತ್ವದ ಪಕ್ಷಗಳ ಸದಸ್ಯರ ಸಂಖ್ಯೆ ಪ್ರತಿ ಪಕ್ಷಗಳಿಗಿಂತ ಕಡಿಮೆ ಇರುವ ಕಾರಣಕ್ಕಾಗಿ ಪ್ರತಿ ಮತವೂ ಪ್ರಾಮುಖ್ಯತೆಯನ್ನು ಪಡೆದುಕೊಳ್ಳುತ್ತದೆ.

ಬಿಜೆಪಿ, ಸುಪ್ರೀಂ ಕೋರ್ಟ್ನ ಮುಖ್ಯ ನ್ಯಾಯಾಧೀಶರ ಪರ ಮತ ಚಲಾಯಿಸುವ ಕಾರಣಕ್ಕಾಗಿ ಅಮಿತ್ ಷಾ ತಮ್ಮ ಪೂರ್ವ ನಿಯೋಜಿತ ಕಾರ್ಯಕ್ರಮಗಳನ್ನು ಮುಂದೂಡಿ ದೆಹಲಿಗೆ ದೌಡಾಯಿಸಿದ್ದಾರೆ. ಅಮಿತ್ ಷಾ ಇಂದು ಮತ್ತೆ ನಾಳೆ ಮುಂಬೈ ಕರ್ನಾಟಕದ ಬೆಳಗಾವಿ, ಬಾಗಲಕೋಟೆ ಹಾಗೂ ಹಾವೇರಿ ಜಿಲ್ಲೆಗಳಲ್ಲಿ ಚುನಾವಣಾ ಪ್ರಚಾರ ಸಭೆಗಳನ್ನು ನಡೆಸಬೇಕಿತ್ತು. ಅಮಿತ್ ಷಾ ಅವರ ರಾಜ್ಯ ಪ್ರವಾಸವನ್ನು ಈ ತಿಂಗಳ 12 ಮತ್ತು 13ಕ್ಕೆ ಮುಂದೂಡಲಾಗಿದೆ. ಈ ಹಿಂದೆ ನಿಗದಿಯಾಗಿದಂತೆ 3 ಜಿಲ್ಲೆಗಳಲ್ಲಿ ಕಾರ್ಯಕ್ರಮಗಳು ಇರಲಿವೆ ಎಂದು ಪಕ್ಷದ ಮೂಲಗಳು ತಿಳಿಸಿವೆ.


ಸಂಬಂಧಿತ ಟ್ಯಾಗ್ಗಳು

impeachment supreme court ಅಮಿತ್ ಷಾ ದೆಹಲಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ