ನಟ ಸುದೀಪ್-ಕುಮಾರ ಸ್ವಾಮಿ ಭೇಟಿ

Actor sudeep met H.D.kumaraswamy at bangalore residence

02-04-2018

ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ನಟ ಸುದೀಪ್ ಬೆಂಗಳೂರಿನಲ್ಲಿ ಇಂದು ಮಾಜಿ ಮುಖ್ಯಮಂತ್ರಿ ಜೆಡಿಎಸ್ ಅಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿಯವರನ್ನು ಭೇಟಿ ಮಾಡಿ ಉಭಯ ಕುಶಲೋಪರಿ ವಿಚಾರಿಸಿದರು.

ಬೆಂಗಳೂರಿನ ಕುಮಾರ ಸ್ವಾಮಿ ಅವರ ನಿವಾಸದಲ್ಲಿ ನಡೆದ ಈ ಭೇಟಿಯ ಸಂದರ್ಭದಲ್ಲಿ ಕುಮಾರಸ್ವಾಮಿ ಅವರ ಪತ್ನಿ ಹಾಗು ಮಾಜಿ ಶಾಸಕಿ ಅನಿತಾ ಕುಮಾರ ಸ್ವಾಮಿ ಹಾಗೂ ಅವರ ಪುತ್ರ ನಿಖಿಲ್ ಹಾಜರಿದ್ದರು. ಕುಮಾರಸ್ವಾಮಿ ಹಾಗೂ ಸುದೀಪ್ ಅವರ ನಡುವೆ ಇತ್ತೀಚಿನ ದಿನಗಳಲ್ಲಿ ನಡೆದ ಎರಡನೇ ಭೇಟಿ ಇದಾಗಿದೆ. ರಾಜ್ಯ ವಿಧಾನಸಭೆ ಚುನಾವಣೆ ಘೋಷಣೆ ಹಿನ್ನೆಲೆಯಲ್ಲಿ ಈ ಭೇಟಿ ಮಹತ್ವ ಪಡೆದುಕೊಂಡಿದೆ. ಜೊತೆಗೆ, ತೀವ್ರ ಕೂತುಹಲಕ್ಕೆ ಕಾರಣವಾಗಿದೆ. ಕುಮಾರ ಸ್ವಾಮಿ ಹಾಗೂ ಸುದೀಪ್ ಈ ಸಂದರ್ಭದಲ್ಲಿ ಚುನಾವಣೆ ಹಾಗೂ ಪ್ರಸ್ತುತ ರಾಜಕೀಯ ವಿದ್ಯಮಾನಗಳ ಕುರಿತು ಸುಮಾರು ಎರಡು ಗಂಟೆಗಳ ಕಾಲ ಸುದೀರ್ಘ ಚರ್ಚೆ ನಡೆಸಿದರು.


ಸಂಬಂಧಿತ ಟ್ಯಾಗ್ಗಳು

sudeep H.D.Kumaraswamy ಖ್ಯಾತ ನಟ ಕುಶಲೋಪರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ