ಎಸ್.ಸಿ/ಎಸ್ಟಿ ಕಾಯ್ದೆ ತೀರ್ಪು: ಪರಾಮರ್ಶೆಗೆ ಕೇಂದ್ರ ಅರ್ಜಿ

central govt filed review petition on sc/st verdict

02-04-2018

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ವಿರುದ್ಧ ದೌರ್ಜನ್ಯ ತಡೆ ಕಾಯ್ದೆ-1989ರ ಅನ್ವಯ ಸುಪ್ರೀಂ ಕೋರ್ಟ್ ಕಳೆದ ತಿಂಗಳು ನೀಡಿದ ಮಹತ್ವದ ಆದೇಶ ಪರಾಮರ್ಶೆಗೆ ಕೇಂದ್ರ ಸರ್ಕಾರ ಇಂದು ಅರ್ಜಿ ಸಲ್ಲಿಸಿದೆ.

ಕೇಂದ್ರ ಕಾನೂನು ಸಚಿವ ರವಿಶಂಕರ್ ಪ್ರಸಾದ್, ಕೇಂದ್ರ ಸರ್ಕಾರ ದಲಿತರ ಹಿತರಕ್ಷಣೆಗೆ ಬದ್ಧವಾಗಿದೆ. ಆದರೆ ಪ್ರತಿಪಕ್ಷಗಳು ಈ ವಿಚಾರವನ್ನು ಅನಗತ್ಯವಾಗಿ ರಾಜಕೀಯ ಗೊಳಿಸುತ್ತಿವೆ ಎಂದು ಆರೋಪಿಸಿದ್ದಾರೆ. ಕಳೆದ ತಿಂಗಳು ಈ ಬಗ್ಗೆ ತೀರ್ಪು ನೀಡಿದ ಸುಪ್ರೀಂ ಕೋರ್ಟ್ ದಲಿತರ ಮೇಲಿನ ದೌರ್ಜನ್ಯ ಪ್ರಕರಣಗಳಲ್ಲಿ ತಪ್ಪಿತಸ್ಥರನ್ನು ತಕ್ಷಣ ಬಂಧಿಸುವ ಅಗತ್ಯವಿಲ್ಲ ಎಂದು ಮಹತ್ವದ ತೀರ್ಮಾನವನ್ನು ಪ್ರಕಟಿಸಿತ್ತು.

ಈ ಬಗ್ಗೆ ದೇಶಾದ್ಯಂತ ದಲಿತ ಸಮುದಾಯದವರಿಂದ ತೀವ್ರ ಆತಂಕ ವ್ಯಕ್ತವಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಮತ್ತಿತರ ಪಕ್ಷಗಳು ತೀರ್ಪು ಪರಿಶೀಲನೆಗೆ ನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸುವಂತೆ ಕೇಂದ್ರ ಸರ್ಕಾರಕ್ಕೆ ಸೂಚಿಸಬೇಕೆಂದು ರಾಷ್ಟ್ರಪತಿಗಳಲ್ಲಿ ಮನವಿ ಮಾಡಿದ್ದವು.


ಸಂಬಂಧಿತ ಟ್ಯಾಗ್ಗಳು

SC/ST Supreme court ರಾಷ್ಟ್ರಪತಿ ದೌರ್ಜನ್ಯ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ