ಹಾವೇರಿಯಲ್ಲಿ ಬಿಜೆಪಿ ಬೃಹತ್ ಸಮಾವೇಶ

massive convention of bjp in Haveri

03-04-2018

ಬಾಗಲಕೋಟೆ: ಹಾವೇರಿ ಮತ್ತು ಬಾಗಲಕೋಟೆ ಜಿಲ್ಲೆಗಳಲ್ಲಿ ಜಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಸಭೆ, ಸಮಾವೇಶಗಳನ್ನು ಹಮ್ಮಿಕೊಂಡಿದ್ದು, ಜಿಲ್ಲೆಯ ಬಾದಾಮಿ ತಾಲ್ಲೂಕಿನ ಶಿವಯೋಗಿ‌ ಮಂದಿರಕ್ಕೆ ಭೇಟಿ ನೀಡಲಿದ್ದಾರೆ. ನಂತರದಲ್ಲಿ 250ಕ್ಕೂ ಅಧಿಕ ಸ್ವಾಮೀಜಿಗಳು ಸೇರಿದಂತೆ ಶ್ರೀಶೈಲ ಕಾಶಿ ಹಾಗೂ ರಂಭಾಪುರಿ ಜಗದ್ಗುರುಗಳೊಂದಿಗೆ ಸಂವಾದ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಇನ್ನು ಹಾವೇರಿಯಲ್ಲಿ ಬಿಜೆಪಿಯಿಂದ ಆಯೋಜಿಸಿರುವ ಒಬಿಸಿ ಸಮಾವೇಶದಲ್ಲಿ ಅಮಿತ್ ಷಾ ಪಾಲ್ಗೊಳ್ಳಲಿದ್ದಾರೆ. ಒಬಿಸಿ ಮೋರ್ಚಾ ರಾಜ್ಯ ಸಾಮಾವೇಶವನ್ನು ಉದ್ಘಾಟಿಸಲಿರುವ ಷಾ, ಸಾವಿರಾರು ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ಈಗಾಗಲೇ ಸಮಾವೇಶಕ್ಕಾಗಿ ಬೃಹತ್ ವೇದಿಕೆ ಸಜ್ಜುಗೊಂಡಿದೆ. ಆದರೆ ಕಾರ್ಯಕ್ರಮಕ್ಕೆ ಬರುವ ಕಾರ್ಯಕರ್ತರಿಗೆ ಚುನಾವಣಾ ನೀತಿ ಸಂಹಿತೆಯ ಭೀತಿ ಎದುರಾಗಿದೆ ಎನ್ನಲಾಗುತ್ತಿದೆ.


ಸಂಬಂಧಿತ ಟ್ಯಾಗ್ಗಳು

Amit shah election ಸಮಾವೇಶ ನೀತಿ ಸಂಹಿತೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ