ತುಮಕೂರಲ್ಲಿ ನಾಳೆ ರಾಹುಲ್ ಗಾಂಧಿ ರೋಡ್ ಶೋ

Rahul gandhi roadshow at tumkur tomorrow

03-04-2018

ತುಮಕೂರು: ನಾಳೆ ತುಮಕೂರಿಗೆ ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಆಗಮನ ಹಿನ್ನೆಲೆ, ಕೆಪಿಸಿಸಿ ಕಚೇರಿಯಲ್ಲಿ ಸುದ್ದಿಗೋಷ್ಠಿ ನಡೆಸಿ ಮಾತನಾಡಿದ ಸಚಿವ ಟಿ.ಬಿ.ಜಯಚಂದ್ರ, ನಾಳೆ ಮಧ್ಯಾಹ್ನ 2:30ಕ್ಕೆ ಹೆಲಿಕಾಪ್ಟರ್ ಮೂಲಕ ತುಮಕೂರಿಗೆ ರಹುಲ್ ಗಾಂಧಿ ಆಗಮಿಸಲಿದ್ದಾರೆ. ಹೆಲಿಪ್ಯಾಡ್ ನಿಂದ ನೇರವಾಗಿ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿ ಶ್ರೀಗಳ ಆಶೀರ್ವಾದ ಪಡೆಯಲಿದ್ದು, ಮಠದಲ್ಲಿ ಶ್ರೀಗಳ ಜೊತೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿಸಿದರು. ರಾಹುಲ್ ಗಾಂಧಿಗೆ ಸಿಎಂ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಕಾಂಗ್ರೆಸ್ ರಾಜ್ಯ ಉಸ್ತುವಾರಿ ಕೆ.ಸಿ.ವೇಣುಗೋಪಾಲ್ ಸಾಥ್ ನೀಡಲಿದ್ದಾರೆ.

ಮಠದಿಂದ ವಿಶೇಷ ಬಸ್ ಮುಖಾಂತರ ಕ್ಯಾತ್ಸಂದ್ರಕ್ಕೆ ಬಂದು ಸಾರ್ವಜನಿಕರ ಜೊತೆ ಕೆಲ ನಿಮಿಷಗಳ ಕಾಲ ರಾಹುಲ್ ಗಾಂಧಿ ಮಾತುಕತೆ ನಡೆಸಲಿದ್ದಾರೆ. ಬಳಿಕ ಕಾಂಗ್ರೆಸ್ ಕಚೇರಿಯಿಂದ ಟೌನ್ ಹಾಲ್ ವರೆಗೆ ವಿಶೇಷ ಬಸ್ ನಲ್ಲಿ ರೋಡ್ ಶೋ ಮತ್ತು ಟೌನ್ ಹಾಲ್ ಬಳಿ ಸಾರ್ವಜನಿಕರನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ. ನಂತರ ವಿಶೇಷ ಬಸ್ ಮುಖಾಂತರ ಕುಣಿಗಲ್ ತಾಲ್ಲೂಕಿಗೆ ತೆರಳಿ ಜನಾಶೀರ್ವಾದ ಸಮಾವೇಶದಲ್ಲಿ ಭಾಗಿಯಾಗಲಿದ್ದಾರೆ. ಸಮಾವೇಶದ ಬಳಿಕ ಹೆಲಿಕಾಪ್ಟರ್ ಮೂಲಕ ರಾಮನಗರ ಜಿಲ್ಲೆಯತ್ತ ಪಯಣ ಬೆಳೆಸಲಿದ್ದಾರೆ ಎಂದು ತಿಳಿಸಿದರು.

 ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ