ಕುಮಾರ ಸ್ವಾಮಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧೆ:ದೇವೇಗೌಡ

H.D kumaraswamy contest from two constituencies: deve gowda

03-04-2018

ಬೆಂಗಳೂರು: ಮಾಜಿ ಮುಖ್ಯ ಮಂತ್ರಿ ಕುಮಾರಸ್ವಾಮಿ ಚನ್ನಪಟ್ಟಣ ಹಾಗೂ ರಾಮನಗರ ಎರಡೂ ವಿಧಾನಸಭಾ ಕ್ಷೇತ್ರಗಳಲ್ಲಿಚುನಾವಣೆಗೆ ಸ್ಪರ್ಧಿಸಲಿದ್ದಾರೆ ಎಂದು ಜೆಡಿಎಸ್ ಅಧ್ಯಕ್ಷ ದೇವೇಗೌಡ ತಿಳಿಸಿದ್ದಾರೆ.  ಚನ್ನಪಟ್ಟಣದಲ್ಲಿ ನಡೆದ ವಿಕಾಸ ಪರ್ವ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರು ಈ ವಿಷಯ ತಿಳಿಸಿದರು.

ಕುಮಾರಸ್ವಾಮಿ ಎರಡೂ ಕ್ಷೇತ್ರದಲ್ಲಿ ಸ್ಪರ್ಧಿಸುವ ನಿರ್ಣಯ ಮಾಡಿದ್ದಾರೆ. ರಾಮನಗರ ಹಾಗೂ ಚನ್ನಪಟ್ಟಣದಿಂದ ಕುಮಾರಸ್ವಾಮಿ ಸ್ಪರ್ಧೆ ಮಾಡಲು ಕಾರ್ಯಕರ್ತರ ಒತ್ತಾಯಕ್ಕೆ ಮಣಿದು ಈ ನಿರ್ಧಾರಕ್ಕೆ ಬಂದಿದ್ದಾರೆ ಎಂದು ದೇವೇಗೌಡ ಹೇಳಿದರು.

ಎರಡೂ ರಾಷ್ಟೀಯ ಪಕ್ಷಗಳು ಪರಸ್ಪರ ಚಾರ್ಜ್ ಶೀಟ್ ಬಿಡುಗಡೆ ಮಾಡಿದ್ದಾರೆ .ಆ ಮೂಲಕ ಇಬ್ಬರೂ ಭ್ರಷ್ಟರು ಎಂದು ಬಹಿರಂಗಪಡಿಸಿದ್ದಾರೆ. ಯಾವುದೇ ಆರೋಪ ಇಲ್ಲದ ಜೆಡಿಎಸ್ ಪಕ್ಷವು ಕುಮಾರಸ್ವಾಮಿ ನೇತೃತ್ವದಲ್ಲಿ ಅಧಿಕಾರಕ್ಕೆ ಬರಬೇಕು ಎಂದು ದೇವೇಗೌಡ ಆಶಿಸಿದರು.

ರಾಷ್ಟ್ರದಲ್ಲಿ ಶಾಂತಿಗೆ ಭಂಗ ತರುತ್ತಿರೋದು ರಾಷ್ಟ್ರೀಯ ಪಕ್ಷಗಳು, ಜೆಡಿಎಸ್ ಬಿಜೆಪಿಯ ‘ಬಿ ಟೀಂ’ ಅಂತೆ, ಸ್ವಲ್ಪ ಜವಾಬ್ದಾರಿಯಿಂದ ಮಾತಾಡಬೇಕು ರಾಷ್ಟ್ರೀಯ ಪಕ್ಷದ ಅಧ್ಯಕ್ಷರು ಅವರು ಎಂದು ದೇವೇಗೌಡ ಮತ್ತೆ ರಾಹುಲ್ ಗಾಂಧಿ ವಿರುದ್ಧ ವಾಗ್ದಾಳಿ ನಡೆಸಿದರು.

ಈದ್ಗಾ ಮೈದಾನದ ಸಮಸ್ಯೆ ಬಗೆಹರಿಸಿದ್ದು ಯಾರೂ ಇಂದಿರಾಗಾಂಧಿ ಮಾಡಿದ್ರಾ, ಈಗಿನ ಸಿಎಂ ಮಾಡಿದ್ರಾ ಸ್ವಲ್ಪ ತಿಳಿದುಕೊಳ್ಳಿ ಎಂದು ರಾಹುಲ್ ಗಾಂಧಿ ಅವರಿಗೆ ಸಲಹೆ ನೀಡಿದರು. ಕನಕಪುರ, ರಾಮನಗರ, ಚನ್ನಪಟ್ಟಣದಲ್ಲಿ ಬಿಜೆಪಿ ಅಥವಾ ಕಾಂಗ್ರೆಸ್ ಅಧಿಕಾರಕ್ಕೆ ಬಂದ್ರೆ ಪಾರ್ಲಿಮೆಂಟ್ ನಲ್ಲಿ ನಾನು ಯಾವ ಮುಖ ಎತ್ತಿ ಮಾತಾಡಲಿ ದಯಮಾಡಿ ಜೆಡಿಎಸ್ ಪಕ್ಷಕ್ಕೆ ಬೆಂಬಲ ನೀಡಿ ಎಂದು ಮನವಿ ಮಾಡಿದರು. ಸಿಎಂ ಅವರ ಎಲ್ಲ ಭಾಗ್ಯ ಸಾಕು, ರೈತರು ಉದ್ಧಾರ ಆಗಬೇಕು ರೈತರಿಗಾಗಿ 9 ಅಂಶಗಳ ಕಾರ್ಯಕ್ರಮ ಪಟ್ಟಿಮಾಡಿ ರೈತರೊಬ್ಬರು ಕೊಟ್ಟಿದ್ದಾರೆ ಅದನ್ನು ಪ್ರಣಾಳಿಕೆಯಲ್ಲಿ ಸೇರಿಸುವೆ ಎಂದು ದೇವೇಗೌಡ ತಿಳಿಸಿದರು.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ