ಯತ್ನಾಳ್,ಅನ್ವರಿ,ಖೂಬ ಬಿಜೆಪಿ ಸೇರ್ಪಡೆ

Khuba,yetnal and others joined BJP

04-04-2018

ಬೆಂಗಳೂರು: ಚುನಾವಣೆ ಹತ್ತಿರವಾದಂತೆ ಪಕ್ಷಾಂತರ ಪರ್ವ ಮುಂದುವರಿದಿದೆ. ಬಿಜೆಪಿಗೆ ಇಂದು ಇಬ್ಬರು ಮಾಜಿ ಕೇಂದ್ರ ಸಚಿವರು, ಇಬ್ಬರು ಮಾಜಿ ಶಾಸಕರು ಸೇರ್ಪಡೆ ಯಾಗಿದ್ದಾರೆ. ಬೆಂಗಳೂರಿನಲ್ಲಿರುವ ಬಿಜೆಪಿ ಪಕ್ಷದ ಕಚೇರಿಯಲ್ಲಿ ಕೇಂದ್ರದ ಮಾಜಿ ಸಚಿವ ಹಾಲಿ ವಿಧಾನಪರಿಷತ್ ಸದಸ್ಯ ಬಸನಗೌಡ ಪಾಟೀಲ ಯತ್ನಾಳ್, ಮತ್ತೊಬ್ಬ ಕೇಂದ್ರ ಸಚಿವ ಬಸವರಾಜ ಪಾಟೀಲ ಅನ್ವರಿ, ಮಾಜಿ ಶಾಸಕರುಗಳಾದ ಮಲ್ಲಿಕಾರ್ಜುನ ಖೂಬ ಹಾಗೂ ನಾಗಪ್ಪ ಸಾಲೋನಿ ಅವರುಗಳನ್ನು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ಪಕ್ಷಕ್ಕೆ ಬರಮಾಡಿಕೊಂಡರು.

ಈ ಮಧ್ಯೆ, ಬಸನಗೌಡ ಪಾಟೀಲ ಯತ್ನಾಳ್ ಅವರ ಬಿಜೆಪಿ ಸೇರ್ಪಡೆಗೆ ಅವರ ತವರು ವಿಜಯಪುರದಲ್ಲಿ ತೀವ್ರ ವಿರೋಧ ವ್ಯಕ್ತವಾಗಿದೆ. ಮಾಜಿ ಸಚಿವ ಅಪ್ಪುಪಟ್ಟಣ ಶೆಟ್ಟಿ ನೇತೃತ್ವದಲ್ಲಿ ಬಿಜೆಪಿ ಕಾರ್ಯಕರ್ತರು ಭಾರೀ ಪ್ರತಿಭಟನೆ ವ್ಯಕ್ತಪಡಿಸಿದ್ದಾರೆ. ಬಿಜೆಪಿ ಕಾರ್ಯಕರ್ತ ಬಾಬು ಜಗದಾಳೆ ವಿಷ ಕುಡಿದು ಆತ್ಮ ಹತ್ಯೆಗೆ ಪ್ರಯತ್ನಿಸಿದ್ದು ಆತನನ್ನು ಚಿಕಿತ್ಸೆಗಾಗಿ ಆಸ್ಪತ್ರೆಗೆ ದಾಖಲು ಮಾಡಲಾಗಿದೆ. ಬಸನಗೌಡ ಪಾಟೀಲರ ಬಿಜೆಪಿ ಸೇರ್ಪಡೆ ಈ ಹಿಂದೆಯೇ ಆಗಬೇಕಿತ್ತಾದರೂ ಪಕ್ಷದಲ್ಲಿನ ಅನೇಕ ನಾಯಕರ ಪ್ರತಿರೋಧದ ಕಾರಣಕ್ಕಾಗಿ ತಡವಾಯಿತು.


ಸಂಬಂಧಿತ ಟ್ಯಾಗ್ಗಳು

Mallikarjun Khuba BJP ಬಸನಗೌಡ ಪಾಟೀಲ ಪ್ರತಿಭಟನೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ