ನಗರದಲ್ಲಿ ಮತ್ತೆ ಸರಗಳ್ಳರ ಹಾವಳಿ

Again chain snatch incident at bangaluru

04-04-2018

ಬೆಂಗಳೂರು: ಮಹಾಲಕ್ಷ್ಮಿ ಲೇಔಟ್‍ನ ಗೆಳೆಯರ ಬಳಗದಲ್ಲಿ ನಿನ್ನೆ ರಾತ್ರಿ ಮನೆಗೆ ನಡೆದುಕೊಂಡು ಹೋಗುತ್ತಿದ್ದ ಮಹಿಳೆಯೊಬ್ಬರ ಚಿನ್ನದ ಸರವನ್ನು ಬೈಕ್‍ನಲ್ಲಿ ಬಂದ ದುಷ್ಕರ್ಮಿಗಳು ಕಸಿದು ಪರಾರಿಯಾಗಿದ್ದಾರೆ. ಗೆಳೆಯರ ಬಳಗದ ಶಾರದಮ್ಮ ಅವರು ರಾತ್ರಿ 10.30 ವೇಳೆ ಮನೆಯ ಹತ್ತಿರದ ರಸ್ತೆಯಲ್ಲಿ ನಡೆದುಕೊಂಡು ಬರುತ್ತಿದ್ದಾಗ ಬೈಕ್‍ನಲ್ಲಿ ಹಿಂದಿನಿಂದ ಬಂದ ಇಬ್ಬರು ದುಷ್ಕರ್ಮಿಗಳು ಅವರ ಕತ್ತಿನಲ್ಲಿದ್ದ 10ಗ್ರಾಂ. ತೂಕದ ಚಿನ್ನದ ಸರವನ್ನು ಕಸಿದು ಪರಾರಿಯಾಗಿದ್ದಾರೆ. ಮಹಾಲಕ್ಷ್ಮಿ ಲೇಔಟ್ ಪೊಲೀಸರು ಪ್ರಕರಣ ದಾಖಲಿಸಿ ದುಷ್ಕರ್ಮಿಗಳಿಗಾಗಿ ತೀವ್ರ ಶೋಧ ನಡೆಸಿದ್ದಾರೆ.

ಇನ್ನೊಂದೆಡೆ ವಿದ್ಯಾರಣ್ಯಪುರದ ಸಂಭ್ರಮ್ ಕಾಲೇಜಿನ ಬಳಿ ಇಂದು ಮುಂಜಾನೆ 3.45ರ ವೇಳೆ ದುಷ್ಕರ್ಮಿಗಳು ರಾಜು ಎಂಬುವರ 5 ಗ್ರಾಂ ತೂಕದ ಚಿನ್ನದ ಸರ ಹಾಗೂ ಮೊಬೈಲ್‍ನ್ನು ದೋಚಿ ಪರಾರಿಯಾಗಿದ್ದಾರೆ. ವಿದ್ಯಾರಣ್ಯಪುರ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

chain snatch robbery ದುಷ್ಕರ್ಮಿ ಮಹಿಳೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ