ನಲಪಾಡ್ ಗೆ ಮತ್ತೆ 14ದಿನ ನ್ಯಾಯಾಂಗ ಬಂಧನ

court ordered 14 days of judicial custody to nalapad again

04-04-2018

ಬೆಂಗಳೂರು: ಉದ್ಯಮಿಯ ಪುತ್ರ ವಿದ್ವತ್ ಮೇಲೆ ಹಲ್ಲೆ ನಡೆಸಿ ಕೊಲೆ ಯತ್ನ ಪ್ರಕರಣ ಎದುರಿಸುತ್ತಾ ಪರಪ್ಪನ ಅಗ್ರಹಾರ ಜೈಲಿನಲ್ಲಿ ಶಿಕ್ಷೆ ಅನುಭವಿಸುತ್ತಿರುವ ಶಾಸಕ ಹ್ಯಾರಿಸ್ ಪುತ್ರ  ನಲಪಾಡ್‍ನ ನ್ಯಾಯಾಂಗ ಬಂಧನದ ಅವಧಿಯನ್ನು ನ್ಯಾಯಾಲಯ ಏಪ್ರಿಲ್ 17ರ ವರೆಗೆ ವಿಸ್ತರಿಸಿದೆ.

ನ್ಯಾಯಾಂಗ ಬಂಧನದ ಅವಧಿ  ಬುಧವಾರಕ್ಕೆ ಅಂತ್ಯವಾದ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಿದ ನಗರದ ಎಸಿಎಂಎಂ ನ್ಯಾಯಾಲಯ ನಲಪಾಡ್ ನ್ಯಾಯಾಂಗ ಬಂಧನ ಅವಧಿಯನ್ನು ಏಪ್ರಿಲ್ 17ರ ವರೆಗೆ 14 ದಿನಗಳ ಕಾಲ ವಿಸ್ತರಿಸಿ ಆದೇಶ ನೀಡಿದೆ. ಪರಪ್ಪನ ಅಗ್ರಹಾರ ಜೈಲಿನಲ್ಲಿರುವ ನಲಪಾಡ್ ಹ್ಯಾರಿಸ್ ವಿಡಿಯೋ ಕಾನ್ಫರೆನ್ಸ್ ಮೂಲಕ ನ್ಯಾಯಾಲಯದ ವಿಚಾರಣೆಗೆ ಹಾಜರಾಗಿದ್ದರು. ಈ ನಡುವೆ ಸೆಷನ್ಸ್ ಕೋರ್ಟ್ ಮತ್ತು ಹೈಕೋರ್ಟ್‍ನಲ್ಲಿ ಜಾಮೀನು ಅರ್ಜಿ ವಜಾಗೊಂಡ ನಂತರ ನಲಪಾಡ್ ಹ್ಯಾರಿಸ್ ಸುಪ್ರೀಂ ಕೋರ್ಟ್‍ನಲ್ಲಿ ಜಾಮೀನು ಸಲ್ಲಿಸಲಿದ್ದಾರೆ ಎಂದು ವಕೀಲರು ತಿಳಿಸಿದ್ದರು.

ಆದರೆ ಇದುವರೆಗೂ ನಲಪಾಡ್ ಪರ ವಕೀಲರು ಸುಪ್ರೀಂ ಕೋರ್ಟ್‍ಗೆ ಅರ್ಜಿ ಸಲ್ಲಿಸಿಲ್ಲ. ನಲಪಾಡ್ ಅರ್ಜಿ ಸಲ್ಲಿಸುವ ಮೊದಲೇ ತಮ್ಮ ಮನವಿ ಆಲಿಸಿ ಜಾಮೀನು ಆದೇಶ ಹೊರಡಿಸಬೇಕು ಎಂದು ಸಿಸಿಬಿ ಅಧಿಕಾರಿಗಳು ಕೇವಿಯೆಟ್ ಸಲ್ಲಿಸಿದ್ದಾರೆ.

ಸೆಷನ್ಸ್ ಕೋರ್ಟ್ ಮತ್ತು ಹೈಕೋರ್ಟ್ ಎರಡೂ ಕಡೆ ಜಾಮೀನು ಅರ್ಜಿ ವಜಾಗೊಂಡಿರುವುದರಿಂದ ಸುಪ್ರೀಂ ಕೋರ್ಟ್‍ನಲ್ಲೂ ಇದೇ ಪುನರಾವರ್ತನೆಯಾಗಬಹುದು ಎಂಬ ಆತಂಕ ಶಾಸಕ ಎನ್.ಎ.ಹ್ಯಾರಿಸ್‍ಗೆ ಇದೆ. ಚುನಾವಣೆ ಹತ್ತಿರ ಬರುತ್ತಿರುವ ಸಮಯದಲ್ಲಿ ಒಂದು ವೇಳೆ ಸುಪ್ರೀಂ ಕೋರ್ಟ್‍ನಿಂದ ಜಾಮೀನು ಸಿಕ್ಕರೂ ಮತ್ತೆ ವಿವಾದ ಭುಗಿಲೇಳಬಹುದು. ಅದ್ದರಿಂದ ರಾಜಕೀಯ ಹಿನ್ನಡೆಯಾಗಬಹುದು ಎಂಬ ಕಾರಣಕ್ಕೆ ಶಾಸಕ ಹ್ಯಾರಿಸ್ ಜಾಮೀನು ಅರ್ಜಿ ಸಲ್ಲಿಸದೇ ಇರಲು ನಿರ್ಧರಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.


ಸಂಬಂಧಿತ ಟ್ಯಾಗ್ಗಳು

vidwath Bail ನಲಪಾಡ್ ಹ್ಯಾರಿಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ