ದಾವಣಗೆರೆ ಬೆಣ್ಣೆ ದೋಸೆ ಸವಿದ ರಾಹುಲ್ ಗಾಂಧಿ

Rahul gandhi tasted davangere benne dosa

04-04-2018

ಬೆಂಗಳೂರು: ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ರಾಜ್ಯದಲ್ಲಿ ಕೈಗೊಂಡಿರುವ ಜನಾಶೀರ್ವಾದ ಯಾತ್ರೆಯ 2ನೇ ದಿನವಾದ ಇಂದು ದಾವಣಗೆರೆಯಲ್ಲಿ ಊಟದ ಸಮಯದಲ್ಲಿ ದಾವಣಗೆರೆ ಬೆಣ್ಣೆ ದೋಸೆ ಹಾಗೂ ಕಾಫಿಯನ್ನು ಸವಿದರು. ಈ ಸಂದರ್ಭದಲ್ಲಿ ರಾಹುಲ್ ಗಾಂಧಿಯವರೊಂದಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಪರಮೇಶ್ವರ್, ಎಐಸಿಸಿ ಉಸ್ತುವಾರಿ ಪ್ರಧಾನ ಕಾರ್ಯದರ್ಶಿ ವೇಣುಗೋಪಾಲ್ ಇದ್ದರು.

ಇದಕ್ಕೂ ಮುನ್ನ ರಾಹುಲ್ ಗಾಂಧಿ ದಾವಣಗೆರೆಯಲ್ಲಿ ವಾಣಿಜ್ಯೋದ್ಯಮಿಗಳೊಂದಿಗೆ ಸಂವಾದದಲ್ಲಿ ಪಾಲ್ಗೊಂಡು, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ಜಿ.ಎಸ್.ಟಿಯನ್ನು ಸರಳಗೊಳಿಸುವ ಬದಲು ದೊಡ್ಡ ಉದ್ದಿಮೆದಾರರಿಗೆ ಅನುಕೂಲವಾಗುವಂತಹ ನಿಯಮಗಳನ್ನು ರೂಪಿಸುತ್ತಿದೆ, ಜಿ.ಎಸ್.ಟಿಯನ್ನು ಮತ್ತಷ್ಟು ಜಟಿಲಗೊಳಿಸುತ್ತಿದೆ. ಜೊತೆಗೆ ಜಿ.ಎಸ್.ಟಿಯನ್ನು ಗಬ್ಬರ್ ಸಿಂಗ್ ಟ್ಯಾಕ್ಸ್ ಆಗಿ ಪರಿವರ್ತಿಸಿದೆ ಎಂದು ಟೀಕಿಸಿದರು. ಜಿ.ಎಸ್.ಟಿಯನ್ನು ಸರಳಗೊಳಿಸಿ ಸಣ್ಣ ಮತ್ತು ಮಧ್ಯಮ ಉದ್ಯಮಗಳನ್ನು ಬಲಪಡಿಸುವುದರಲ್ಲಿ ಕಾಂಗ್ರೆಸ್ ನಂಬಿಕೆ ಇರಿಸಿದೆ ಎಂದು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಸ್ಪಷ್ಟಪಡಿಸಿದರು.


ಸಂಬಂಧಿತ ಟ್ಯಾಗ್ಗಳು

Rahul gandhi Davanagere ಜಿ.ಎಸ್.ಟಿ ಟ್ಯಾಕ್ಸ್


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ