ಕುತೂಹಲ ಕೆರಳಿಸಿದ ಸಿಎಂ-ಸುದೀಪ್ ಭೇಟಿ

Actor sudeep met cm siddaramaiah

05-04-2018

ಬೆಂಗಳೂರು: ದಕ್ಷಿಣ ಭಾರತದ ಖ್ಯಾತ ಚಲನಚಿತ್ರ ನಟ ಸುದೀಪ್ ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದರು. ಮುಖ್ಯಮಂತ್ರಿಯವರ ಅಧಿಕೃತ ನಿವಾಸ ಕಾವೇರಿಯಲ್ಲಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಸುದೀಪ್ ಅವರು ಮಾತುಕತೆ ನಡೆಸಿದರು. ಆದರೆ, ಮಾತುಕತೆಯ ವಿವರಗಳೂ ಇನ್ನೂ ಲಭ್ಯವಾಗಬೇಕಿದೆ. ಸುದೀಪ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರೊಂದಿಗೆ ಉತ್ತಮ ಸಂಬಂಧ ಹೊಂದಿರುವ ಕಾರಣಕ್ಕಾಗಿ ಈ ಭೇಟಿ ಕುತೂಹಲ ಕೆರಳಿಸಿದೆ.

ಈ ವಾರದ ಆರಂಭದಲ್ಲಿ ಸುದೀಪ್, ಜಾತ್ಯತೀತ ಜನತಾದಳದ ರಾಜ್ಯಾಧ್ಯಕ್ಷ ಹೆಚ್.ಡಿ.ಕುಮಾರಸ್ವಾಮಿ ಅವರನ್ನು ಭೇಟಿ ಮಾಡಿದ್ದರು. ಆಗ ಕುಮಾರ ಸ್ವಾಮಿ ಸುದೀಪ್ ಅವರಿಗೆ ಪಕ್ಷದಿಂದ ಚುನಾವಣೆಗೆ ಸ್ಪರ್ಧಿಸುವಂತೆ ಆಹ್ವಾನ ನೀಡದ್ದರು. ಅದು ಸಾಧ್ಯವಾಗದಿದ್ದರೆ ಪಕ್ಷದ ಪರವಾಗಿ ಚುನಾವಣಾ ಪ್ರಚಾರದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದರು. ಒಟ್ಟಿನಲ್ಲಿ ಕುಮಾರ ಸ್ವಾಮಿ ಅವರನ್ನು ಭೇಟಿಯಾದ ವಾರದಲ್ಲೇ ಮುಖ್ಯ ಮಂತ್ರಿ ಸಿದ್ದರಾಮಯ್ಯ ಅವರನ್ನು ಸುದೀಪ್ ಭೇಟಿಯಾಗಿರುವುದು ತೀವ್ರ ಕುತೂಹಲಕ್ಕೆ ಕಾರಣವಾಗಿದೆ.


ಸಂಬಂಧಿತ ಟ್ಯಾಗ್ಗಳು

siddaramaiah sudeep ಜಾತ್ಯತೀತ ಕಾವೇರಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ