ಹೊಸೂರು ಬಳಿ ಪ್ರಯಾಣಿಕರ ಪರದಾಟ

tamil nadu bandh: no buses near hosur

05-04-2018

ಆನೇಕಲ್: ಕಾವೇರಿ ನದಿ ನೀರು ನಿರ್ವಹಣಾ ಮಂಡಳಿ ರಚನೆಗೆ ಒತ್ತಾಯಿಸಿ ತಮಿಳುನಾಡು ಬಂದ್ ಮಾಡಿ ಪ್ರತಿಭಟನೆ ನಡೆಸುತ್ತಿದ್ದು, ಹೊಸೂರು ಬಸ್ ನಿಲ್ದಾಣದಲ್ಲಿ ಬಸ್ ಸಂಚಾರ ಸ್ಥಗಿತಗೊಂಡಿದೆ. ಇದರಿಂದ ರಾಜ್ಯದ ಪ್ರಯಾಣಿಕರ ಪರದಾಡುವಂತಾಗಿದೆ. ಖಾಸಗಿ ವಾಹನಗಳನ್ನೇರಿ ರೈತರು ವ್ಯಾಪಾರಿಗಳು ಹಾಗೂ ಕಾರ್ಮಿಕರ ರಾಜ್ಯಕ್ಕೆ ಆಗಮಿಸುತ್ತಿದ್ದಾರೆ. ತಮಿಳುನಾಡಿನ ವಿಲ್ಲುಪುರಂನಿಂದ ಬರುತ್ತಿದ್ದ ಕೆ.ಎಸ್.ಆರ್.ಟಿ.ಸಿ ಬಸ್ ತಡೆದು ಪ್ರತಿಭಟಿಸಿದ್ದಾರೆ. ಇದರಿಂದ ಕೆಲಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಆದರೆ ಯಾವುದೇ ಅಹಿತಕರ ಘಟನೆ ನಡೆದಿಲ್ಲ.

 


ಸಂಬಂಧಿತ ಟ್ಯಾಗ್ಗಳು

Tamil Nadu bandh ವಾಹನ ನಿರ್ವಹಣಾ ಮಂಡಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ