'ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿ 3-4 ದಿನಗಳಲ್ಲಿ’05-04-2018

ಬೆಂಗಳೂರು: ರಾಜ್ಯ ವಿಧಾನಸಭೆಗೆ ನಡೆಯುವ ಚುನಾವಣೆಗೆ ಬಿಜೆಪಿ ಅಭ್ಯರ್ಥಿಗಳ ಮೊದಲ ಪಟ್ಟಿಯನ್ನು ಮೂರು ನಾಲ್ಕು ದಿನಗಳಲ್ಲಿ ಪ್ರಕಟಿಸಲಾಗುವುದು. ನಂತರ ಉಳಿದ ಅಭ್ಯರ್ಥಿಗಳ ಪಟ್ಟಿ ಎರಡನೇ ಹಂತದಲ್ಲಿ ಬಿಡುಗಡೆ ಮಾಡಲಾಗುವುದು. ಒಟ್ಟು ಎರಡು ಹಂತದಲ್ಲಿ ಪಟ್ಟಿ ಪ್ರಕಟ ಮಾಡಲಾಗುತ್ತದೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಮುರುಳೀಧರ್ ರಾವ್ ತಿಳಿಸಿದ್ದಾರೆ.

ಕುಟುಂಬಕ್ಕೆ ಎರಡು ಟಿಕೆಟ್ ವಿಚಾರದ ಬಗ್ಗೆ ಕೋರ್ ಕಮಿಟಿ ಕ್ರಮ ತೆಗೆದುಕೊಳ್ಳುತ್ತದೆ. ಈಗಲೇ ಅದರ ಬಗ್ಗೆ ಹೇಳಲಾಗದು ಎಂದರು. ವಂಶಪಾರಂಪರ್ಯ ರಾಜಕಾರಣಕ್ಕೆ ಬಿಜೆಪಿಯಲ್ಲಿ ಅವಕಾಶವಿಲ್ಲ ಆದರೆ, ಯಾರು ಬೇಕಾದರೂ ಪ್ರಚಾರ ಮಾಡಬಹುದು. ಟಿಕೆಟ್ ತೀರ್ಮಾನ ಮಾಡುವುದು ಕೋರ್ ಕಮಿಟಿ ಎಂದು ಮುರುಳೀಧರ್ ರಾವ್ ವಿವರಿಸಿದರು.

ಕಾಂಗ್ರೆಸ್ ಪ್ರಜಾಪ್ರಭುತ್ವಕ್ಕೆ ಮಾರಕವಾಗಿದೆ. ಕಾಂಗ್ರೆಸ್ ವೋಟ್ ಬ್ಯಾಂಕ್ ಪಾಲಿಟಿಕ್ಸ್ ಮಾಡುತ್ತಿದೆ. ಡಿವೈಡ್ ಅಂಡ್ ರೂಲ್ ಮಾಡಿಕೊಂಡು ಬರುತ್ತಿದೆ. ಪ್ರಧಾನಿ ನರೇಂದ್ರ ಮೋದಿ ಹೇಳುತ್ತಲೇ ಬರುತ್ತಿದ್ದಾರೆ. ಕಾಂಗ್ರೆಸ್ ಮುಕ್ತ ಮಾಡಬೇಕೆಂದು. ನಾಳೆ ಇದರ ಬಗ್ಗೆ ವಿಭಿನ್ನ ಪ್ರಯತ್ನ ಹಮ್ಮಿಕೊಂಡಿದೆ. ಬೂತ್ ಮಟ್ಟದಲ್ಲಿ ಕಾರ್ಯಕ್ರಮ ಮಾಡುತ್ತಿದ್ದೇವೆ, ಸ್ಥಳೀಯ ಕಾರ್ಯಕರ್ತರು, ಮುಖಂಡರ ಅಭಿಪ್ರಾಯ ಸಂಗ್ರಹ ಮಾಡುತ್ತೇವೆ. ಕ್ಷೇತ್ರದ ಸಮಸ್ಯೆ, ಅಭ್ಯರ್ಥಿ ಆಯ್ಕೆ ಬಗ್ಗೆ ಎಲ್ಲರ ಅಭಿಪ್ರಾಯ ಸಂಗ್ರಹಿಸುತ್ತೇವೆ. ನಮ್ಮ ಎಲ್ಲಾ ನಾಯಕರು ಇದರಲ್ಲಿ ಭಾಗವಹಿಸುತ್ತಾರೆ. ಡೋರ್ ಟು ಡೋರ್ ಕಾರ್ಯಕ್ರಮ ಇದಾಗಿದೆ. ಇದರಲ್ಲಿ ಒಟ್ಟು 6ಲಕ್ಷ ಸದಸ್ಯರು ಭಾಗಿಯಾಗಲಿದ್ದಾರೆ. ಇದೊಂದು ವಿನೂತನ ಪ್ರಯೋಗ ಎಂದು ಮುರುಳೀಧರ್ ರಾವ್ ತಿಳಿಸಿದರು.


ಸಂಬಂಧಿತ ಟ್ಯಾಗ್ಗಳು

Muralidhar Rao core committe ಡೋರ್ ಟು ಡೋರ್ ರಾಜಕಾರಣ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ