ಕೇಂದ್ರ ಕಾರಾಗೃಹದಲ್ಲಿ ಖೈದಿ ಆತ್ಮಹತ್ಯೆ

Bengaluru: A prisoner committed suicide

06-04-2018

ಬೆಂಗಳೂರು: ಸಜಾ ಬಂಧಿಯೊಬ್ಬ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡ ಘಟನೆ ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ನಡೆದಿದೆ. ಶಿವಮೊಗ್ಗ ಮೂಲದ ಮಾಸ್ತಿ ಕುಮಾರ್ (32) ಕಳೆದ 10 ತಿಂಗಳಿನಿಂದ ಸಜಾ ಬಂಧಿಯಾಗಿ ಕಾರಾಗೃಹದಲ್ಲಿದ್ದ. ಇಂದು ಬೆಳಗ್ಗೆ ಆತನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಕಾರಾಗೃಹದ 'ಎ' ಬ್ಯಾರಕ್ ನಲ್ಲಿ ಪತ್ತೆಯಾಗಿದೆ. ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ. ಮಾಸ್ತಿ ಕುಮಾರ್ ಶವವನ್ನು ಮರಣೋತ್ತರ ಪರೀಕ್ಷೆಗಾಗಿ ವಿಕ್ಟೋರಿಯಾ ಆಸ್ಪತ್ರೆಗೆ ರವಾನಿಸಲಾಗಿದೆ.


ಸಂಬಂಧಿತ ಟ್ಯಾಗ್ಗಳು

suicide prisoner ಬ್ಯಾರಕ್ ಶವ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ