ಅರಣ್ಯಾಧಿಕಾರಿ ಕಾರಲ್ಲಿ ದಾಖಲೆ ರಹಿತ ಹಣ ಪತ್ತೆ!

3 lakhs of money found in forest range officers car

06-04-2018

ಬಳ್ಳಾರಿ: ರಾಯಚೂರು ವಲಯದ ಅರಣ್ಯಾಧಿಕಾರಿ ಕಾರಿನಲ್ಲಿ ದಾಖಲೆ ಇಲ್ಲದ ಸುಮಾರು 3ಲಕ್ಷಕ್ಕೂ ಅಧಿಕ ಹಣ ಪತ್ತೆಯಾಗಿದೆ. ಬಳ್ಳಾರಿ ಜಿಲ್ಲೆ ಹೊಸಪೇಟೆ ತಾಲ್ಲೂಕಿನ ಬುಕ್ಕಸಾಗರ ಚೆಕ್ ಪೋಸ್ಟ್ ಬಳಿ ಪೊಲೀಸರು ಮತ್ತು ಚುನಾವಣಾಧಿಕಾರಿಗಳು ಪರಿಶೀಲಿಸಿದಾಗ ಹಣ ಇರುವುದು ಪತ್ತೆಯಾಗಿದೆ. ರಾಯಚೂರಿನ ವಲಯ ಅರಣ್ಯಾಧಿಕಾರಿ ರಾಘವೇಂದ್ರ ಎಂಬುವರ ಕಾರಿನಲ್ಲಿ ಹಣ ಪತ್ತೆಯಾಗಿದೆ. ಗಂಗಾವತಿಯಿಂದ ಹೊಸಪೇಟೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಪರಿಶೀಲನೆ ವೇಳೆ ಹಣ ಪತ್ತೆಯಾಗಿದ್ದು, ಅರಣ್ಯ ಇಲಾಖೆಯ ಹಣವೆಂದು ರಾಘವೇಂದ್ರ ಹೇಳುತ್ತಿದ್ದಾರೆ. ದಾಖಲೆ ಇಲ್ಲದೆ ಕಾರಣ ಹಣವನ್ನು ವಶಕ್ಕೆ ಪಡೆದ ಹೊಸಪೇಟೆ ಎಸಿ ಗಾರ್ಗಿ ಜೈನ್, ತನಿಖೆ ಕೈಗೊಂಡಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ