ಮೆಟ್ರೋ ಕಾಮಗಾರಿ ವೇಳೆ ಅವಾಂತರ

metro pillar fell down 2 cars crash

06-04-2018

ಬೆಂಗಳೂರು: ಬನ್ನೇರುಘಟ್ಟ ಮುಖ್ಯ ರಸ್ತೆಯಲ್ಲಿ ನಿರ್ಮಾಣ ಹಂತದ ಮೆಟ್ರೋ ಪಿಲ್ಲರ್ ನ ಕಬ್ಬಿಣದ ಸರಳು ಬಿದ್ದು ಎರಡು ಕಾರುಗಳು ಜಖಂ ಅಗಿ ಕೆಲಕಾಲ ರಸ್ತೆ ಸಂಚಾರ ಅಸ್ಥವ್ಯಸ್ಥಗೊಂಡಿತ್ತು. ಬನ್ನೇರುಘಟ್ಟ ಮುಖ್ಯ ರಸ್ತೆಯ ಅಪೋಲೋ ಆಸ್ಪತ್ರೆ ಬಳಿ ಮೆಟ್ರೋ ಕಾಮಗಾರಿ ನಡೆಯುತಿದ್ದು, ರಾತ್ರಿ 12.20ರ ವೇಳೆ ಇದ್ದಕಿದ್ದ ಹಾಗೆ ಪಿಲ್ಲರ್ ರಸ್ತೆಗೆ ಬಿದ್ದು ಸ್ವಿಫ್ಟ್ ಮತ್ತು ಈಟಿಯಸ್ ಕಾರ್ ಜಖಂಗೊಂಡಿದೆ. ಘಟನೆಯಿಂದ ಅದೃಷ್ಟವಶಾತ್ ಯಾವುದೇ ಪ್ರಾಣಹಾನಿಯಾಗಿಲ್ಲ.

ಕೆಲಕಾಲ ಘಟನಾ ಸ್ಥಳದಲ್ಲಿ ಸಂಚಾರ ದಟ್ಟಣೆ ಊಂಟಾಗಿತ್ತು. ಕೂಡಲೇ ಸ್ಥಳಕ್ಕೆ ಅಗಮಿಸಿದ ಪೊಲೀಸರು ಜಖಂಗೊಂಡಿದ್ದ ವಾಹನಗಳನ್ನು ತೆರವು ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಟ್ಟಿದ್ದಾರೆ. ಮೈಕೋ ಲೇಔಟ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.


ಸಂಬಂಧಿತ ಟ್ಯಾಗ್ಗಳು

metro pillar ಅದೃಷ್ಟವಶಾತ್ ಜಖಂ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ