ದಿವ್ಯಾಂಗರಿಗೆ ಮತದಾನಕ್ಕೆ ವಿಶೇಷ ವ್ಯವಸ್ಥೆ06-04-2018

ಬೆಂಗಳೂರು: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ 7ಸಾವಿರ ದಿವ್ಯಾಂಗರನ್ನು ಗುರುತಿಸಲಾಗಿದ್ದು, ದಿವ್ಯಾಂಗರು ಹಾಗೂ ಹಿರಿಯ ನಾಗರಿಕರು ಸಹ ಶೇಕಡ 100ರಷ್ಟು ಮತದಾನದಲ್ಲಿ ಭಾಗವಹಿಸುವ ಸಲುವಾಗಿ ಮತಗಟ್ಟೆಗಳಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಲಾಗಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಆರ್.ಲತಾ ತಿಳಿಸಿದ್ದಾರೆ.

ದೊಡ್ಡಬಳ್ಳಾಪುರದಲ್ಲಿಂದು ಚುನಾವಣಾ ಆಯೋಗದ ಮತದಾನದ ವ್ಯವಸ್ಥಿತ ಶಿಕ್ಷಣ ಹಾಗೂ ಚುನಾವಣೆಯಲ್ಲಿ ಮತದಾರರ ಸಹಭಾಗಿತ್ವ ಸಮಿತಿಯ ವತಿಯಿಂದ ನಡೆದ ಮತದಾನ ಜಾಗೃತಿ ಕಾರ್ಯಶಕ್ರಮದಲ್ಲಿ ಭಾಗವಹಿಸಿ ಮಾತನಾಡಿದ ಅವರು, ದಿವ್ಯಾಂಗರು ಹಾಗೂ ಹಿರಿಯ ನಾಗರಿಕರಿಗೆ ಮತಗಟ್ಟೆಗಳಲ್ಲಿ ವಿಶೇಷ ವ್ಯವಸ್ಥೆ ಕಲ್ಪಿಸಿರುವ ಬಗ್ಗೆ ತಿಳುವಳಿಕೆ ಮೂಡಿಸಲಾಗುತ್ತಿದೆ ಎಂದು ಹೇಳಿದರು.

ಜಿಲ್ಲೆಯ ಮತದಾರರು ಮತದಾನ ಪ್ರಕ್ರಿಯೆಯಲ್ಲಿ ಸಕ್ರಿಯವಾಗಿ ಭಾಗವಹಿಸಬೇಕೆಂದು ಜಿಲ್ಲೆಯಾದ್ಯಂತ ಮತದಾನದ ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ತಿಳಿಸಿದರು. ಇದೇ ವೇಳೆ ದಿವ್ಯಾಂಗರು ಹಾಗೂ ಹಿರಿಯ ನಾಗರಿಕರು ಜಾಥಾದಲ್ಲಿ ಭಾಗವಹಿಸಿ ಮತದಾನದ ಬಗ್ಗೆ ಜಾಗೃತಿ ಮೂಡಿಸಿದರು.


ಸಂಬಂಧಿತ ಟ್ಯಾಗ್ಗಳು

senior citizen polling booth ದಿವ್ಯಾಂಗ ಮತದಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ