ಮತದಾರರ ಪಟ್ಟಿಗೆ ಹೆಸರು ಸೇರಿಸಲು ಅವಕಾಶ

Election commission gave a chance to enrol names on 8th april

06-04-2018

ಬೆಂಗಳೂರು: ಕರ್ನಾಟಕ ವಿಧಾನಸಭಾ ಚುನಾವಣೆಯಲ್ಲಿ ಈ ವರ್ಷದ ಜನವರಿ 1ರೊಳಗೆ 18 ವರ್ಷ ತುಂಬಿರುವ ಪ್ರತಿಯೊಬ್ಬರು ಮತದಾನ ಮಾಡಬಹುದಾಗಿದೆ. ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿ ಆಗದಿದ್ದರೆ ಮತದಾನಕ್ಕೆ ಅವಕಾಶ ಇರುವುದಿಲ್ಲ. ಅಂತಹವರು ಮತದಾರ ಪಟ್ಟಿಯಲ್ಲಿ ಹೆಸರು ನೋಂದಾಯಿಸಲು ಚುನಾವಣಾ ಆಯೋಗ ಇದೇ ತಿಂಗಳ 8ರಂದು ಮಿಂಚಿನ ನೋಂದಣಿ ಹೆಸರಿನಲ್ಲಿ ಅವಕಾಶ ಕಲ್ಪಿಸಿದೆ. ಮತದಾರ ಪಟ್ಟಿಯಲ್ಲಿ ಸೇರಿರದಿದ್ದರೆ ಮಿಂಚಿನ ನೋಂದಣಿ ದಿನದಂದು ಅರ್ಜಿ ಸಲ್ಲಿಸಿ ಚುನಾವಣೆಯಲ್ಲಿ ಮತ ಚಲಾಯಿಸಬಹುದು.

ಈಗಾಗಲೇ ಮತದಾರರಾಗಿದ್ದರೆ, ಮತದಾರ ಪಟ್ಟಿಯಲ್ಲಿ ಹೆಸರು ಕೈ ಬಿಟ್ಟು ಹೋಗಿದ್ದರೆ ಮತದಾರ ಗುರುತಿನ ಚೀಟಿಗಾಗಿ ಹೊಸದಾಗಿ ಅರ್ಜಿ ಸಲ್ಲಿಸಬಹುದಾಗಿದೆ. ಗುರುತಿನ ಚೀಟಿಯಲ್ಲಿ ದೋಷಗಳನ್ನು ಸರಿಪಡಿಸಲು ಪೂರಕ ದಾಖಲೆ ನೀಡಿ ನಮೂನೆ 8ರಲ್ಲಿ ಅರ್ಜಿ ಸಲ್ಲಿಸಬಹುದು.

 


ಸಂಬಂಧಿತ ಟ್ಯಾಗ್ಗಳು

voter election ಅರ್ಜಿ ಗುರುತಿನ ಚೀಟಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ