ಕ್ಲೋರಿನ್ ಗ್ಯಾಸ್ ಸೋರಿಕೆ..25 ಕ್ಕೂ ಅಧಿಕ ಮಂದಿ ಅಸ್ವಸ್ಥ

Kannada News

16-05-2017

ಹಾಸನ: ಕ್ಲೋರಿನ್ ಗ್ಯಾಸ್ ಸೋರಿಕೆಯಿಂದ 25 ಕ್ಕೂ ಅಧಿಕ ಮಂದಿ ಅಸ್ವಸ್ಥರಾದ ಘಟನೆ ಹಾಸನ ಜಿಲ್ಲೆ ಬೇಲೂರು ಹೊರವಲಯದ ಗೆಂಡೆಹಳ್ಳಿಯಲ್ಲಿ ನಡೆದಿದೆ. ನೀರು ಪೂರೈಕೆ ಮಾಡುವ ಪಂಪ್ ಹೌಸ್ ನಲ್ಲಿ ರಾತ್ರಿ ಕ್ಲೋರಿನ್ ಗ್ಯಾಸ್ ಸೋರಿಕೆಯಾಗಿದ್ದು, ಸುಮಾರು ಅರ್ಧ ಕಿಲೋಮೀಟರ್ ವರೆಗೂ ಅನಿಲ ವ್ಯಾಪಿಸಿದೆ. ಇದರಿಂದಾಗಿ 25 ಕ್ಕೂ ಅಧಿಕ ಮಂದಿ ಅಸ್ವಸ್ಥರಾಗಿದ್ದು, ಕೂಡಲೇ ಪುರಸಭೆ ಸಿಬ್ಬಂದಿ ಹಾಗೂ ಅಗ್ನಿಶಾಮಕ ದಳದ ಸಿಬ್ಬಂದಿ ಸ್ಥಳಕ್ಕೆ ಧಾವಿಸಿ ಸೋರಿಕೆಯನ್ನು ತಡೆಗಟ್ಟಿದ್ದಾರೆ. ಅಸ್ವಸ್ಥಗೊಂಡವರನ್ನು ಸ್ಥಳೀಯ ಆಸ್ಪತ್ರೆಗೆ ಹಾಗೂ ಹಾಸನ ಜಿಲ್ಲಾಸ್ಪತ್ರೆಗೆ ಸೇರಿಸಲಾಗಿದೆ. ಸ್ಥಳಕ್ಕೆ ಬೇಲೂರು ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Links :ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ