'ಜೆಡಿಎಸ್ ಕಾಂಗ್ರೆಸ್ ನ ‘ಬಿ ಟೀಂ’- ಶೆಟ್ಟರ್



09-04-2018

ಹುಬ್ಬಳ್ಳಿ: ಈಗಾಗಲೇ ಬಿಜೆಪಿಯ ಮೊದಲ‌ 72 ಅಭ್ಯರ್ಥಿಗಳ ಪಟ್ಟಿ ಬಿಡುಗಡೆಯಾಗಿದೆ. ಟಿಕೆಟ್ ಸಿಗದವರು ಸಣ್ಣಪುಟ್ಟ ಅಸಮಾಧಾನ ವ್ಯಕ್ತಪಡಿಸಿರುವುದು ಸಹಜ, ಅವರನ್ನ ಸಮಾಧಾನ ಪಡಿಸಲಾಗುವುದು ಎಂದು ವಿಧಾನಸಭೆ ವಿಪಕ್ಷ ನಾಯಕ‌ ಜಗದೀಶ್ ಶೆಟ್ಟರ್ ಹೇಳಿದ್ದಾರೆ. ಇನ್ನು ಎರಡು-ಮೂರು ದಿನದಲ್ಲಿ ಎರಡನೇ ಪಟ್ಟಿ ಬಿಡುಗಡೆ‌ಯಾಗಲಿದೆ. ನಮ್ಮ‌ ಗುರಿ ಮಿಷನ್ 150 ತಲುಪುವುದು ಎಂದು ವಿಶ್ವಾಸ ವ್ಯಕ್ತಪಡಿಸಿದ್ದಾರೆ.

ರಾಜ್ಯದಲ್ಲಿ ಬಿಜೆಪಿ 65-70 ಸ್ಥಾನ ಗೆಲ್ಲುತ್ತೆ ಎಂಬ ಸಿಎಂ ಹೇಳಿಕೆಗೆ ತಿರುಗೇಟು ನೀಡಿದ ಶೆಟ್ಟರ್, ಸಿದ್ದರಾಮಯ್ಯ ಯಾವಾಗ ಜ್ಯೋತಿಷ್ಯರಾದ್ರು ಗೊತ್ತಿಲ್ಲ?ಅವರ ಭವಿಷ್ಯವೇ ಅತಂತ್ರವಾಗಿದೆ‌. ಚಾಮುಂಡೇಶ್ವರಿ, ವರುಣ, ಬಾದಾಮಿ, ಗಂಗಾವತಿ ಹೀಗೆ ಕ್ಷೇತ್ರ ಹುಡುಕಿಕೊಂಡಿ ಓಡಾಡುತ್ತಿದ್ದಾರೆ. ಎಲ್ಲಿಯೂ ಅವರಿಗೆ ಗೆಲ್ಲುವ ಭರವಸೆ ಮೂಡುತ್ತಿಲ್ಲ. ಕಾಂಗ್ರೆಸ್ ಹೀನಾಯವಾಗಿ ಸೋಲಲಿದ್ದಾರೆ ಎಂದು ಕಿಡಿಕಾರಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಷಾ ರಾಜ್ಯದಲ್ಲಿ ಪ್ರವಾಸ ಮಾಡಿದ ಬಳಿಕ ಬಿಜೆಪಿಯ ಶಕ್ತಿ ಮತ್ತಷ್ಟು ವೃದ್ಧಿಸಲಿದೆ. ಜೆಡಿಎಸ್, ಕಾಂಗ್ರೆಸ್ ನ ‘ಬಿ ಟೀಂ’ ಅದನ್ನು ರಾಹುಲ್ ಉಲ್ಟಾ ಹೇಳಿದ್ದಾರೆ. ಸದನದಲ್ಲಿ ಜೆಡಿಎಸ್ ಯಾವತ್ತೂ ಕಾಂಗ್ರೆಸ್ ವಿರುದ್ಧ ಮಾತನಾಡಿಲ್ಲ. ಕಾಂಗ್ರೆಸ್, ಜೆಡಿಎಸ್ ಜೊತೆಗೆ ಬಿಜೆಪಿ ಸಮಾನ ಅಂತರ ಇದೆ ಎಂದರು.


ಸಂಬಂಧಿತ ಟ್ಯಾಗ್ಗಳು

Jagadish shettar siddaramaiah ವಿರುದ್ಧ ಪ್ರಧಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ