ಪೊಲೀಸರಿಗೆ ಚುನಾವಣಾ ಆಯೋಗ ಎಚ್ಚರಿಕೆ!

Election Commission had warned police officers

09-04-2018

ಬೆಂಗಳೂರು: ಚುನಾವಣಾ ಕಣಕ್ಕಿಳಿಯುವ ಅಭ್ಯರ್ಥಿಗಳು, ರಾಜಕೀಯ ನಾಯಕರು ಸೇರಿದಂತೆ ಎಲ್ಲ ವಿಭಾಗಗಳ ಮೇಲೆ ಕಣ್ಣಿಟ್ಟಿದ್ದ ಚುನಾವಣಾ ಆಯೋಗ ಪೊಲೀಸ್ ಅಧಿಕಾರಿಗಳ ಮೇಲೆಯೂ ನಿಗಾವಹಿಸಿದೆ. ನೀತಿ ಸಂಹಿತೆ ಜಾರಿಯಾದ ಕ್ಷಣದಿಂದ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಪೊಲೀಸ್ ಅಧಿಕಾರಿಗಳು ಪ್ರತಿನಿತ್ಯ ದಿನಚರಿ ಬರೆಯಬೇಕು ಎನ್ನುವುದನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಆಯೋಗ ಸೂಚನೆ ನೀಡಿದೆ.

ಕೆಲ ಪೊಲೀಸ್ ಅಧಿಕಾರಿಗಳು ಚುನಾವಣೆಯಲ್ಲಿ ಸ್ಪರ್ಧಿಸುವವರಿಗೆ ಸಹಕಾರ ನೀಡಲಿದ್ದಾರೆ ಎಂದು ಆರ್‍ಟಿಐ ಕಾರ್ಯಕರ್ತ ಹನುಮೇಗೌಡ ಎಂಬವರು ಚುನಾವಣಾ ಆಯೋಗಕ್ಕೆ ಮನವಿ ಮಾಡಿಕೊಂಡಿದ್ದರು. ಈ ಹಿನ್ನೆಲೆಯಲ್ಲಿ ನೀತಿ ಸಂಹಿತೆ ಜಾರಿಯಾದ ಕ್ಷಣದಿಂದ ಚುನಾವಣಾ ಪ್ರಕ್ರಿಯೆ ಮುಗಿಯುವವರೆಗೂ ಪೊಲೀಸ್ ಅಧಿಕಾರಿಗಳು ಪ್ರತಿನಿತ್ಯ ದಿನಚರಿ ಬರೆಯಬೇಕು.

ರಾಜ್ಯದ ಎಲ್ಲ ಜಿಲ್ಲೆಯ ಜಿಲ್ಲಾಧಿಕಾರಿಗಳಿಗೆ ದಿನಚರಿ ಬಗ್ಗೆ ಎಚ್ಚರಿಸಿ ಚುನಾವಣಾ ಆಯೋಗ ಪತ್ರ ಬರೆದಿದೆ. ಚುನಾವಣಾ ನೀತಿ ಸಂಹಿತೆಯಲ್ಲಿ ಪೊಲೀಸ್ ಅಧಿಕಾರಿಗಳು ದಿನಚರಿ ಬರೆಯಬೇಕೆಂಬ ಅಂಶವಿದೆ. ಆದರೆ ಇಲ್ಲಿಯವರೆಗೂ ಈ ನಿಯಮವನ್ನ ಗಂಭೀರವಾಗಿ ಪರಿಗಣಿಸಿರಲಿಲ್ಲ. ಈ ಬಾರಿ ಪೊಲೀಸ್ ಅಧಿಕಾರಿಗಳ ದಿನಚರಿ ಬಗ್ಗೆ ಚುನಾವಣಾ ಆಯೋಗ ಎಚ್ಚರಿಸಿದೆ.


ಸಂಬಂಧಿತ ಟ್ಯಾಗ್ಗಳು

ಪ್ರಕ್ರಿಯೆ ಎಚ್ಚರ code of conduct RTI


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ