ಕೇಂದ್ರದ ಮಾಜಿ ಸಚಿವ ಪಿ.ಚಿದಂಬರಂ ಮನೆ ಮೇಲೆ ಸಿಬಿಐ ದಾಳಿ

Kannada News

16-05-2017

ನವದೆಹಲಿ :- ವಿದೇಶಿ ವಿನಿಮಯ ಉಲ್ಲಂಘನೆ ಹಾಗೂ ಕಾನೂನು ಬಾಹಿರ ಹೂಡಿಕೆಗಳ ಆರೋಪಗಳ ಮೇಲೆ ಕೇಂದ್ರದ ಮಾಜಿ ಸಚಿವ ಮತ್ತು ಕಾಂಗ್ರೆಸ್ ಧುರೀಣ ಪಿ.ಚಿದಂಬರಂ ಮತ್ತು ಅವರ ಪುತ್ರ ಕಾರ್ತಿ ಅವರ ಚೆನ್ನೈ, ದೆಹಲಿ, ಮುಂಬೈ, ಗುರುಗ್ರಾಮ್ ಮತ್ತು ನೋಯ್ಡಾದಲ್ಲಿರುವ ಮನೆಗಳು ಮತ್ತು ಕಚೇರಿಗಳ ಮೇಲೆ ಸಿಬಿಐ ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದೆ.   ಹತ್ತು ಉನ್ನತಾಧಿಕಾರಿಗಳ ನೇತೃತ್ವದ ತಂಡಗಳು ಏಕಕಾಲದಲ್ಲಿ 22 ಸ್ಥಳಗಳ ಮೇಲೆ ದಾಳಿ ನಡೆಸಿ ಅಕ್ರಮ ವಹಿವಾಟುಗಳಿಗೆ ಸಂಬಂಧಪಟ್ಟ ದಾಖಲೆ ಪತ್ರಗಳನ್ನು ಪರಿಶೀಲಿಸಿತು. ಚೆನ್ನೈನ 8 ಸ್ಥಳಗಳ ಮೇಲೆ ನಡೆದ ದಾಳಿ ವೇಳೆ ಈ ಪ್ರಕರಣಕ್ಕೆ ಸಂಬಂಧಪಟ್ಟ ಹೆಚ್ಚುವರಿ ಮಾಹಿತಿ ಲಭಿಸಿದೆ.

Links :
ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ