ಪ್ರಿಯಾಂಕ್ ವಿರುದ್ಧ ತೊಡೆ ತಟ್ಟಿದ ಗುತ್ತೇದಾರ್

malikayya guttedar vs priyank kharge

12-04-2018

ಕಲಬುರ್ಗಿ: ಕಾಂಗ್ರೆಸ್ ತೊರೆದು ಇತ್ತೀಚೆಗೆ ಬಿಜೆಪಿ ಸೇರಿರುವ ಅಫಜಲಪುರ ಶಾಸಕ ಮಾಲೀಕಯ್ಯ ಗುತ್ತೇದಾರ್, ಐಟಿ-ಬಿಟಿ ಹಾಗೂ ಪ್ರವಾಸೋದ್ಯಮ ಸಚಿವ ಪ್ರಿಯಾಂಕ್ ಖರ್ಗೆ ವಿರುದ್ಧ ತೊಡೆತಟ್ಟಿದ್ದಾರೆ. ನನ್ನ ಕ್ಷೇತ್ರಕ್ಕೆ ಬಂದು ಪ್ರಚಾರ ಮಾಡಲಿ ನೋಡ್ತಿನಿ ಎಂದು ಸವಾಲು ಹಾಕಿದ್ದಾರೆ.

ಬಿಜೆಪಿ ಪಕ್ಷ ಸೇರ್ಪಡೆಯಾದ ನಂತರ ಮೊದಲ ಬಾರಿ ಕಲಬುರ್ಗಿಗೆ ಆಗಮಿಸಿದ ಮಾಲೀಕಯ್ಯ, ಪ್ರಿಯಾಂಕ್ ಖರ್ಗೆ ಹಾಗೂ ಮಲ್ಲಿಕಾರ್ಜುನ ಖರ್ಗೆ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಪ್ರಿಯಾಂಕ್ ಖರ್ಗೆ ನನ್ನ ಕ್ಷೇತ್ರದಲ್ಲಿ ಪ್ರಚಾರಕ್ಕೆ ಬರ್ತಾರಂತೆ ನೋಡ್ತಿನಿ, ಆ ಬಚ್ಚಾ ನನ್ನ ಕ್ಷೇತ್ರಕ್ಕೆ ಕಾಲಿಟ್ಟು ಸೋಲಿಸಲಿ ನೋಡೋಣ, ಅಪ್ಪ-ಮಕ್ಕಳು ಕಲಬುರ್ಗಿ ಜಿಲ್ಲೆಯ ಯಾವುದೇ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಿದರೂ ಸೋಲಿಸೋದೇ ನನ್ನ ಗುರಿ, ಅವರಿಬ್ಬರನ್ನು ಸೋಲಿಸೇ ಸೋಲಿಸುತ್ತೇನೆ ಎಂದು ಗುಡುಗಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ