ಹೆಚ್ಡಿಕೆ ವಿರುದ್ಧ ಕುಡತಿನಿ ಶ್ರೀನಿವಾಸ್ ಆರೋಪ

Bellary jds leader Srinivas Kudithini allegation against hdk

12-04-2018

ಬಳ್ಳಾರಿ: ಬಳ್ಳಾರಿ ಜೆಡಿಎಸ್ ನಲ್ಲಿ ಭಿನ್ನಮತ ಭುಗಿಲೆದ್ದಿದೆ, ಬಳ್ಳಾರಿ ನಗರ ಟಿಕೆಟ್ ಆಕಾಂಕ್ಷಿ ಜೆಡಿಎಸ್ ಮುಖಂಡ ಕುಡತಿನಿ ಶ್ರೀನಿವಾಸ್ ಹೆಚ್.ಡಿ.ಕುಮಾರ ಸ್ವಾಮಿ ವಿರುದ್ಧ ಗರಂ ಆಗಿದ್ದಾರೆ. ಕುಮಾರಸ್ವಾಮಿ ಮತ್ತು ದೇವೆಗೌಡರು ನನಗೆ ಟಿಕೆಟ್ ಕೊಡುವ ಭರವಸೆ ನೀಡಿದ್ದರು. ಟಿಕೆಟ್ ಜೊತೆಗೆ ಪಕ್ಷದ ಹುದ್ದೆ ನೀಡುವ ಭರವಸೆಯನ್ನೂ ನೀಡಿದ್ದರು, ಈಗ ನನಗೆ ದ್ರೋಹ ಮಾಡಿದ್ದಾರೆ ಎಂದು ಶ್ರೀನಿವಾಸ್ ಕಿಡಿಕಾರಿದ್ದಾರೆ. ಪಕ್ಷದಲ್ಲಿ ದುಡಿದವರನ್ನು ಕಡೆಗಣಿಸಿದ್ದಾರೆ, ಹಣ ಇದ್ದವರಿಗೆ ಕುಮಾರಸ್ವಾಮಿ ಟಿಕೆಟ್ ಕೊಡುತ್ತಾರೆ, ಇದನ್ನೇ ಕುಮಾರಸ್ವಾಮಿ ಮಾಡಿಕೊಂಡು ಬಂದಿದ್ದಾರೆ ಎಂದು ಗಂಭೀರ ಆರೋಪ ಮಾಡಿದ್ದಾರೆ.

 

 

 


ಸಂಬಂಧಿತ ಟ್ಯಾಗ್ಗಳು

kudithini srinivas JDS ಆಕಾಂಕ್ಷಿ ಗಂಭೀರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ