ಬಾದಾಮಿಯಿಂದಲೂ ಸಿದ್ದರಾಮಯ್ಯ ಸ್ಪರ್ಧೆ?

12-04-2018
ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜೊತೆಗೆ ಬಾದಾಮಿ ವಿಧಾನಸಭೆ ಕ್ಷೇತ್ರದಿಂದಲೂ ಚುನಾವಣೆಗೆ ಸ್ಪರ್ಧಿಸುವರು ಎನ್ನುವ ಸುದ್ದಿಗೆ ಇಂಬು ಕೊಡುವ ಘಟನೆ ನಡೆದಿದೆ. ಬಾದಾಮಿ ಕ್ಷೇತ್ರದ ನೂರಾರು ಮುಖಂಡರು ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿ ಬಾದಾಮಿ ಕ್ಷೇತ್ರದಿಂದ ಸ್ಪರ್ಧಿಸುವಂತೆ ಮನವಿ ಮಾಡಿದ್ದಾರೆ.
ಕೆಪಿಸಿಸಿ ಕಾರ್ಯಾಧ್ಯಕ್ಷರಾದ ಎಸ್.ಆರ್.ಪಾಟೀಲ್, ಶಾಸಕ ಚಿಮ್ಮನಕಟ್ಟಿ ಅವರ ನೇತೃತ್ವದಲ್ಲಿ ಮುಖ್ಯಮಂತ್ರಿಯವರನ್ನು ಭೇಟಿಯಾದ ಮುಖಂಡರು. ನಿಮ್ಮ ಸ್ಪರ್ಧೆಯಿಂದ ಉತ್ತರ ಕರ್ನಾಟಕ ಭಾಗದಲ್ಲಿ ಪಕ್ಷಕ್ಕೆ ಅನುಕೂಲವಾಗುತ್ತದೆ ಎಂದು ತಿಳಿಸಿದರು. ಆಗ ಮುಖ್ಯಮಂತ್ರಿ ಸಿದ್ದರಾಮಯ್ಯ ನಿಮ್ಮ ಅಭಿಪ್ರಾಯಯವನ್ನು ಹೈಕಮಾಂಡ್ ಗೆ ತಿಳಿಸುವೆ ಎಂದು ಹೇಳಿದರು. ಒಟ್ಟಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಜೊತೆಗೆ ಬಾದಾಮಿ ವಿಧಾನಸಭಾ ಕ್ಷೇತ್ರದಿಂದಲೂ ಈ ಬಾರಿ ಸ್ಪರ್ಧಿಸುವರು ಎನ್ನುವ ಸುದ್ದಿಗೆ ಪೂರಕವಾಗಿ ಈ ಘಟನೆ ನಡೆದಿದೆ.
ಒಂದು ಕಮೆಂಟನ್ನು ಹಾಕಿ