ಕಾಂಗ್ರೆಸ್ ವಿರುದ್ಧ ಅಮಿತ್ ಷಾ ಕಿಡಿ

amit shah participated in BJP protest against congress in dharwad

12-04-2018

ಬೆಂಗಳೂರು: ಸಂಸದೀಯ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ವಿಶ್ವಾಸವಿಲ್ಲದ ಕಾಂಗ್ರೆಸ್ ಪಕ್ಷ 23ದಿನಗಳ ಸಂಸತ್ ಅಧಿವೇಶನವನ್ನು ಹಾಳುಮಾಡಿದ್ದು, ಕಾಂಗ್ರೆಸ್‍ನಿಂದ ಪ್ರಜಾಪ್ರಭುತ್ವಕ್ಕೆ ಧಕ್ಕೆ ಇದೆ ಎಂದು ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.

ಧಾರವಾಡದಲ್ಲಿಂದು ಡಿ.ಸಿ. ಕಚೇರಿ ಎದುರು ಮುಷ್ಕರ ಸತ್ಯಾಗ್ರಹದಲ್ಲಿ ಭಾಗವಹಿಸಿ ಮಾತನಾಡಿ, ಪಂಜಾಬ್ ನ್ಯಾಷನಲ್ ಬ್ಯಾಂಕ್ ಹಗರಣ, ಅವಿಶ್ವಾಸ ಗೊತ್ತುವಳಿ, ಆಂಧ್ರಪ್ರದೇಶಕ್ಕೆ ವಿಶೇಷ ಸ್ಥಾನಮಾನ ನೀಡುವ ಯಾವುದೇ ವಿಚಾರ ಕುರಿತು ಚರ್ಚಿಸಲು ಸರ್ಕಾರ ಸಿದ್ಧವಿದ್ದು, ಬ್ಯಾಂಕ್ ಹಗರಣ ವಿಚಾರದಲ್ಲಿ ಕಾಂಗ್ರೆಸ್ ನಾಯಕರ ಹೆಸರೇ ಹೊರಬೀಳುವ ಭಯದಿಂದ ಸಂಸತ್‍ನಲ್ಲಿ ಚರ್ಚೆಗೆ ಅಡ್ಡಿಯುಂಟುಮಾಡಿದೆ ಎಂದು ಆರೋಪಿಸಿದರು.

ಕಾಂಗ್ರೆಸ್‍ನ ವಿಭಜನಕಾರಿ ರಾಜಕೀಯ ಮತ್ತು ಭ್ರಷ್ಟಾಚಾರದಿಂದ ಬೇಸತ್ತಿರುವ ಜನ ಕರ್ನಾಟಕದಲ್ಲಿ ಬಿಜೆಪಿಗೆ ಸಮರ್ಥನೆ ನೀಡಲಿದ್ದಾರೆ ಎಂದು ಅಮಿತ್ ಷಾ ವಿಶ್ವಾಸ ವ್ಯಕ್ತಪಡಿಸಿದರು. ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪ, ವಿಧಾನಸಭೆಯ ಪ್ರತಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಸಂಸದ ಪ್ರಹ್ಲಾದ್ ಜೋಶಿ ಮತ್ತಿತರರು ಷಾ ಅವರೊಂದಿಗಿದ್ದರು. ಷಾ ಅವರು ನಾಳೆ ಬೆಳಗಾವಿ ಜಿಲ್ಲೆಯಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ