ಶ್ರೀರಾಮುಲು ಪ್ರಚಾರಕ್ಕೆ ತಿಪ್ಪೇಸ್ವಾಮಿ ಬೆಂಬಲಿಗರ ವಿರೋಧ

sriramulu today visiting molakalmuru: thippeswamy supporters opposed

13-04-2018

ಚಿತ್ರದುರ್ಗ: ಸಂಸದ ಶ್ರೀರಾಮುಲುಗೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಪ್ರಕಟಿಸಿದಾಗಿನಿಂದಲೂ, ಹಾಲಿ ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರು ತೀವ್ರ ಆಕ್ರೋಶಗೊಂಡಿದ್ದಾರೆ. ಅಲ್ಲದೇ ತಿಪ್ಪೇಸ್ವಾಮಿಗೆ ಟಿಕೆಟ್ ನೀಡುವಂತೆ ಒತ್ತಡ ಹೇರುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಬಳ್ಳಾರಿಯ ಶ್ರೀರಾಮುಲು ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಇದರ ಬೆನ್ನಲ್ಲೇ ಮೊಳಕಾಲ್ಮೂರಿನಲ್ಲಿ ಪ್ರಚಾರಕ್ಕೆ ಶ್ರೀರಾಮುಲು ಆಗಮಿಸುತ್ತಿದ್ದು, ಪ್ರತಿಭಟನೆ ನಡೆಸಲು ತಿಪ್ಪೇಸ್ವಾಮಿ ಬೆಂಬಲಿಗರು ಸಜ್ಜಾಗಿದ್ದಾರೆ. ನಾಯಕನಹಟ್ಟಿ ದೇಗುಲದ ಮುಂಭಾಗದಲ್ಲಿ ಜಮಾಯಿಸಿರುವ ತಿಪ್ಪೇಸ್ವಾಮಿ ಬೆಂಬಲಿಗರು ಶ್ರೀರಾಮುಲು ಆಗಮನಕ್ಕೆ ವಿರೋಧ ವ್ಯಕ್ತಪಡಿಸಿದ್ದಾರೆ. ಒಟ್ಟಾರೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ತಿಪ್ಪೇಸ್ವಾಮಿ ಬೆಂಬಲಿಗರ ಆಕ್ರೋಶ ಮುಂದುವರೆದಿದೆ.


ಸಂಬಂಧಿತ ಟ್ಯಾಗ್ಗಳು

B. Sriramulu Ticket ಶಾಸಕ ತಿಪ್ಪೇಸ್ವಾಮಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ