ತಿಪ್ಪೇಸ್ವಾಮಿ ಬೆಂಬಲಿಗರ ರಂಪಾಟ

Thippeswamy supporters continued protest for ticket

13-04-2018

ಚಿತ್ರದುರ್ಗ: ಸಂಸದ ಶ್ರೀರಾಮುಲುಗೆ ಮೊಳಕಾಲ್ಮೂರು ವಿಧಾನಸಭಾ ಕ್ಷೇತ್ರದಿಂದ ಟಿಕೆಟ್ ಪ್ರಕಟಿಸಿದಾಗಿನಿಂದಲೂ, ಹಾಲಿ ಶಾಸಕ ತಿಪ್ಪೇಸ್ವಾಮಿ ಬೆಂಬಲಿಗರು ತೀವ್ರ ಆಕ್ರೋಶಗೊಂಡಿದ್ದಾರೆ. ಅಲ್ಲದೇ ತಿಪ್ಪೇಸ್ವಾಮಿಗೆ ಟಿಕೆಟ್ ನೀಡವಂತೆ ಒತ್ತಡ ಹೇರುತ್ತಿದ್ದಾರೆ. ಕಳೆದೆರಡು ದಿನಗಳ ಹಿಂದಷ್ಟೇ ಬಳ್ಳಾರಿಯ ಶ್ರೀರಾಮುಲು ನಿವಾಸಕ್ಕೆ ಮುತ್ತಿಗೆ ಹಾಕಲು ಯತ್ನಿಸಿದ್ದರು. ಇದರ ಬೆನ್ನಲ್ಲೇ ಮೊಳಕಾಲ್ಮೂರಲ್ಲಿ ಪ್ರಚಾರಕ್ಕೆ ಶ್ರೀರಾಮುಲು ಆಗಮಿಸುತ್ತಿದ್ದಂತೆ ಮಹಿಳೆಯರು ತಡೆಯೊಡ್ಡಿದ್ದಾರೆ. ಈ ವೇಳೆ ಮಹಿಳೆಯರನ್ನು ಪೊಲೀಸರು ತಡೆಯಲು ಪೊಲೀಸರು ಹರಸಾಹಸ ಪಡಬೇಕಾಯಿತು. ಧರಣಿ ನಿರತ ತಿಪ್ಪೇಸ್ವಾಮಿ ಬೆಂಬಲಿಗರು ಶ್ರೀರಾಮುಲು ವಿರುದ್ಧ ಧಿಕ್ಕಾರ ಕೂಗಿದ ಘಟನೆಯೂ ನಡೆಯಿತು. ಒಟ್ಟಾರೆ ಮೊಳಕಾಲ್ಮೂರು ಕ್ಷೇತ್ರದಲ್ಲಿ ಟಿಕೆಟ್ ಗಾಗಿ ತಿಪ್ಪೇಸ್ವಾಮಿ ಬೆಂಬಲಿಗರ ಆಕ್ರೋಶ ಮುಂದುವರೆದಿದೆ.

 


ಸಂಬಂಧಿತ ಟ್ಯಾಗ್ಗಳು

tippeswamy supporters ಮೊಳಕಾಲ್ಮೂರು ಆಕ್ರೋಶ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ