‘ಸಿಎಂ ಬೇರೆ ಕ್ಷೇತ್ರ ಹುಡುಕುತ್ತಿರುವುದೇಕೆ’-ಷಾ ಪ್ರಶ್ನೆ13-04-2018

ಬೆಳಗಾವಿ: ಜೀವನದಲ್ಲಿ ಮೊದಲ ಬಾರಿಗೆ ಕಿತ್ತೂರಿನ ನಾಡಿಗೆ ಆಗಿಮಿಸಿದ್ದೇನೆ. 1857ರ ಕ್ರಾಂತಿಗೂ ಮುನ್ನ ಸ್ವಾತಂತ್ರ್ದ ಹೋರಾಟದ ಕಿಚ್ಚನ್ನು ಹಚ್ಚಿದ್ದವಳು ವೀರರಾಣಿ ಕಿತ್ತೂರು ಚೆನ್ನಮ್ಮ. ಸ್ವಾತಂತ್ರ್ಯ ಹೋರಾಟದಲ್ಲಿ ಬಲಿದಾನವೂ ಆಗಿರುವುದು ಇತಿಹಾಸವಾಗಿದೆ ಎಂದು ಬಿಜೆಪಿ ರಾಷ್ಟೀಯ ಅಧ್ಯಕ್ಷ ಅಮಿತ್ ಷಾ ಹೇಳಿದ್ದಾರೆ.

ನಂತರ ನಂದಗಢದ ಸಮಾವೇಶದಲ್ಲಿ ಮಾತನಾಡಿ ಅವರು, ಇಂದು ನನಗೆ ಸೌಭಾಗ್ಯದ ದಿನವಾಗಿದೆ. ರಾಣಿ ಚನ್ನಮ್ಮ, ಸಂಗೊಳ್ಳಿ ರಾಯಣ್ಣ ಅವರಿಗೆ ಗೌರವ ಸಲ್ಲಿಸುವ ಸೌಭಾಗ್ಯ ಸಿಕ್ಕಿದೆ. ದೇಶದಲ್ಲಿ ಪ್ರಥಮ ಬಾರಿಗೆ ಬ್ರಿಟಿಷ್ ವಿರುದ್ಧ ಹೋರಾಟವನ್ನು ಕಿತ್ತೂರಿನ ಅರಸರು ಮಾಡಿದ್ದಾರೆ. ಸಂಗೊಳ್ಳಿ ರಾಯಣ್ಣ ಅಪ್ರತಿಮ ಹೋರಾಟಗಾರ. ಪುಣ್ಯ ಭೂಮಿ ಭೇಟಿಯಿಂದ ಸ್ಥೈರ್ಯ ಹೆಚ್ಚಾಗಿದೆ ಎಂದರು.

ಇನ್ನು ಕಾಂಗ್ರೆಸ್ ವಿರುದ್ಧ ವಾಗ್ದಾಳಿ ನಡೆಸಿದ ಷಾ, ಕನಾ೯ಟಕದಲ್ಲಿ ವಿಧಾನಸಭಾ ಚುನಾವಣೆ ಬಿರುಸಿನಿಂದ ಕೂಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಜನರ ಆಕ್ರೋಶಕ್ಕೆ ಹೆದರಿ ಮತ್ತೊಂದು ಕ್ಷೇತ್ರವನ್ನು ಹುಡುಕುತ್ತಿದ್ದಾರೆ, ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯರ ಸರಕಾರದ ಮೇಲೆ ರಾಜ್ಯದ ಜನತೆ ಅಸಮಾಧಾನ ವ್ಯಕ್ತಪಡಿಸುತ್ತಿದ್ದಾರೆ ಎಂದರು.

ನಾನು ಪ್ರವಾಸ ಮಾಡಿದ ಕಡೆಗಳಲ್ಲಿ ಸಿದ್ದರಾಮಯ್ಯನವರ ಬಗ್ಗೆ ಆಕ್ರೋಶ ವ್ಯಕ್ತಪಡಿಸುವ ಜನತೆ ಯಡಿಯೂರಪ್ಪನವರ ಮೇಲೆ ಪ್ರೀತಿ ತೋರುತ್ತಿದ್ದಾರೆ. ಚುನಾವಣೆ ಮುನ್ನವೇ ಬಿಜೆಪಿಗೆ ಗೆಲುವಿಗೆ ಸಂದೇಶ ನೀಡುತ್ತಿದೆ. ಪ್ರಚಂಡ ಬಹುಮತದಿಂದ ಕನಾ೯ಟಕದಲ್ಲಿ ಯಡಿಯೂರಪ್ಪ ನೇತೃತ್ವದಲ್ಲಿ  ಬಿಜೆಪಿ ಅಧಿಕಾರ ಹಿಡಿಯಲಿದೆ. ಪ್ರಧಾನಿ ನರೇಂದ್ರ ಮೋದಿ ಹಾಗೂ ಯಡಿಯೂರಪ್ಪನವರ ಸಮ್ಮುಖದಲ್ಲಿ ಕನಾ೯ಟಕವನ್ನು ಅಭಿವೃದ್ಧಿಯ ಪಧದಲ್ಲಿ ಕೊಂಡೊಯ್ಯಲಾಗುವುದು ಎಂದು ಹೇಳಿದ್ದಾರೆ.

 ಭ್ರಷ್ಟಾಚಾರ ಮುಕ್ತಿಗಾಗಿ ನಾವು ಹೋರಾಟ ಮಾಡಬೇಕಿದೆ. ರಾಜ್ಯ ಸರ್ಕಾರ ವಿರುದ್ಧ ನಾವು ಎಲ್ಲರು ಹೋರಾಟ ನಡೆಸಬೇಕು. ಯಡಿಯೂರಪ್ಪ ನೇತೃತ್ವದಲ್ಲಿ ಉತ್ತಮ ಸರ್ಕಾರ ನೀಡುವುದು ನಮ್ಮ ಸಂಕಲ್ಪ. ಬಿಜೆಪಿಗೆ ಆಶೀರ್ವದಿಸುವಂತೆ ಅಮಿತ್ ಷಾ ಮತದಾರರಲ್ಲಿ ಮನವಿ ಮಾಡಿದ್ದಾರೆ.

 


ಸಂಬಂಧಿತ ಟ್ಯಾಗ್ಗಳು

amit shah B.S.Yeddyurappa ಅಭಿವೃದ್ಧಿ ಅಸಮಾಧಾನ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ