ಕಂಟೈನರ್ ಗೆ ಲಾರಿ ಡಿಕ್ಕಿ: ಇಬ್ಬರ ಸಜೀವ ದಹನ

Horrific accident is two people burnt alive

13-04-2018 472

ಬೆಂಗಳೂರು: ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಕಂಟೈನರ್ ಗೆ  ಗೂಡ್ಸ್ ಲಾರಿ ಡಿಕ್ಕಿ ಹೊಡೆದು ಹೊತ್ತಿಕೊಂಡ ಬೆಂಕಿಯಿಂದ ಇಬ್ಬರು ಸಜೀವ ದಹನವಾಗಿರುವ ದಾರುಣ ಘಟನೆ ನಗರದ ಹೊರವಲಯ ಅತ್ತಿಬೆಲೆ ಚೆಕ್ ಪೋಸ್ಟ್ ಬಳಿ ನಿನ್ನೆ ತಡರಾತ್ರಿ ನಡೆದಿದೆ.

ಮೃತರು ತಮಿಳುನಾಡು ಮೂಲದವರಾಗಿದ್ದು, ಓರ್ವ ತಂಜಾವೂರಿನ ವೇಲು ಮುರುಗನ್(25) ಮತ್ತೊಬ್ಬನ ಗುರುತು ಪತ್ತೆಯಾಗಿಲ್ಲ. ನಿನ್ನೆ ಮಧ್ಯರಾತ್ರಿ 1ಗಂಟೆ ಸುಮಾರಿಗೆ ಹೊಸೂರು ಕಡೆಯಿಂದ ಬಂದ ಗೂಡ್ಸ್ ಲಾರಿ ನಿಂತಿದ್ದ ಕಂಟೈನರ್ ವಾಹನಕ್ಕೆ ಡಿಕ್ಕಿ ಹೊಡೆದಿದೆ.

ಕ್ಷಣ ಮಾತ್ರದಲ್ಲಿ ಎರಡು ವಾಹನಗಳಿಗೆ ಬೆಂಕಿ ವ್ಯಾಪಿಸಿದ್ದು, ನೋಡ ನೋಡುತ್ತಿದ್ದಂತೆ ಲಾರಿಯಲ್ಲಿ ಸಿಲುಕಿದ್ದ ಇಬ್ಬರು ಬೆಂಕಿಯ ಕೆನ್ನಾಲಿಗೆಗೆ ಸಿಲುಕಿ ಸಜೀವ ದಹನವಾಗಿದ್ದಾರೆ. ಕಂಟೈನರ್ ವಾಹನದಲ್ಲಿ ಕೆಮಿಕಲ್ ಸಾಗಾಟ ಮಾಡಲಾಗುತ್ತಿದ್ದು, ದಿಢೀರ್ ಬೆಂಕಿ ಹೊತ್ತಿಕೊಳ್ಳಲು ರಾಸಾಯನಿಕವೇ ಕಾರಣ ಎನ್ನಲಾಗಿದೆ. ಸ್ಥಳಕ್ಕೆ ಆಗಮಿಸಿದ ಅತ್ತಿಬೆಲೆ ಪೊಲೀಸರು ಮೃತ ದೇಹಗಳನ್ನು ಹತ್ತಿರದ ಖಾಸಗಿ ಆಸ್ಪತ್ರೆ ಶವಗಾರದಲ್ಲಿ ಇರಿಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Accident burnt alive ಶವಗಾರ ರಾಸಾಯನಿಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ