ಶಾಲಾ ಶಿಕ್ಷಕ ನೇಣಿಗೆ ಶರಣು

Illness: The school teacher committed suicide

13-04-2018

ಬೆಂಗಳೂರು: ಅನಾರೋಗ್ಯದ ನಿಮಿತ್ತ ತನ್ನ ಮನೆಯಲ್ಲಿಯೇ ಶಾಲಾ ಶಿಕ್ಷಕ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾಬಸ್ ಪೇಟೆಯ ಟೀಚರ್ಸ್ ಕಾಲೋನಿಯಲ್ಲಿ ನಡೆದಿದೆ. ಮೂಲತಃ ಚಿತ್ರದುರ್ಗ ಜಿಲ್ಲೆ ಮೂಗಲಕೊಟ್ಟಗೆ ಗ್ರಾಮದ ನಿವಾಸಿ ನಾಗರಾಜು.ಎಸ್(38) ಆತ್ಮಹತ್ಯೆ ಮಾಡಿಕೊಂಡ ಶಿಕ್ಷಕರಾಗಿದ್ದಾರೆ. ಸದ್ಯ ತಾಲ್ಲೂಕಿನ ಗೋವೇನಹಳ್ಳಿ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಪಾಠ ಶಾಲೆಯಲ್ಲಿ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದ ನಾಗರಾಜ್ ಕಳೆದ 6 ತಿಂಗಳ ಹಿಂದೆಯಷ್ಟೇ ಜ್ಯೋತಿ ಎಂಬುವರೊಂದಿಗೆ ಮದುವೆಯಾಗಿದ್ದರು.

ಆದರೆ ಕೆಲ ದಿನಗಳಿಂದೆ ಅನಾರೋಗ್ಯಕ್ಕೆ ತುತ್ತಾಗಿದ್ದರು ಎನ್ನಲಾಗಿದೆ. ಪತ್ನಿ ಹೊರಗೆ ತೆರಳಿದ್ದ ವೇಳೆ ನೇಣು ಬಿಗಿದು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಈ ಸಂಬಂಧ ಸ್ಥಳಕ್ಕೆ ದಾಬಸ್‍ಪೇಟೆ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

suicide master ಅನಾರೋಗ್ಯ ಶಿಕ್ಷಕ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ