ಬಿಎಂಟಿಸಿ ಚಾಲಕ, ನಿರ್ವಾಹಕನ ಮೇಲೆ ಹಲ್ಲೆ

2 college students assaulted BMTC driver and conductor

13-04-2018

ಬೆಂಗಳೂರು: ನಗರದ ಹೊರವಲಯದ ಆನೇಕಲ್‍ನಲ್ಲಿ ಬೆಳಿಗ್ಗೆ ಪ್ರತಿಷ್ಠಿತ ಖಾಸಗಿ ಕಾಲೇಜಿನ ನಾಲ್ವರು ವಿದ್ಯಾರ್ಥಿಗಳು ಕ್ಷುಲಕ ಕಾರಣಕ್ಕೆ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ನಡೆಸಿ ಪರಾರಿಯಾಗಿದ್ದು, ಅವರಿಗಾಗಿ ಪೊಲೀಸರು ತೀವ್ರ ಶೋಧ ನಡೆಸಿದ್ದಾರೆ.

ಕ್ಷುಲಕ ಕಾರಣಕ್ಕೆ 2 ಬಿಎಂಟಿಸಿ ಬಸ್‍ಗಳ ಚಾಲಕ ಹಾಗೂ ನಿರ್ವಾಹಕರ ಮೇಲೆ ಇಬ್ಬರು ವಿದ್ಯಾರ್ಥಿಗಳು ಹಲ್ಲೆ ನಡೆಸಿ ಪರಾರಿಯಾಗಿದ್ದಾರೆ. ಪರಾರಿಯಾಗುವ ವೇಳೆ ಒಂದು ಬೈಕ್ ಹಾಗೂ ಬ್ಯಾಗ್ ಬಿಟ್ಟು ಹೋಗಿದ್ದು ಬ್ಯಾಗ್‍ನಲ್ಲಿ ಓರ್ವ ವಿದ್ಯಾರ್ಥಿಯ ಭಾವಚಿತ್ರ ಪತ್ತೆಯಾಗಿದೆ. ಇದರ ಆಧಾರದ ಮೇಲೆ ಚಾಲಕ ಹಾಗೂ ನಿರ್ವಾಹಕ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

ಈ ಕಾಲೇಜಿನ ವಿದ್ಯಾರ್ಥಿಗಳು ಈ ಹಿಂದೆಯೂ ಹಲವು ಬಾರಿ ಬಿಎಂಟಿಸಿ ಚಾಲಕ ಹಾಗೂ ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ್ದು, ಪೊಲೀಸರಿಗೆ ದೂರು ನೀಡಿದರೂ ಪ್ರತಿಷ್ಠಿತ ಕಾಲೇಜು ಎಂಬ ಕಾರಣದಿಂದ ಕ್ರಮ ಕೈಗೊಳ್ಳಲು ಹಿಂದೇಟು ಹಾಕುತ್ತಿದ್ದಾರೆ ಎಂದು ನಿರ್ವಾಹಕರು ದೂರಿದ್ದಾರೆ.

ಕಾಲೇಜಿನ ವಿದ್ಯಾರ್ಥಿಗಳು ವಿದ್ಯಾರ್ಥಿನಿಯರನ್ನು ತಮ್ಮ ಬೈಕ್‍ಗಳಲ್ಲಿ ಕೂರಿಸಿಕೊಂಡು ಡ್ರಾಪ್ ಮಾಡಲು ಮುಂದಾದ ಸಂದರ್ಭದಲ್ಲಿ ಬಿಎಂಟಿಸಿ ಬಸ್ ಬಂದಿದೆ. ಹೀಗಾಗಿ ವಿದ್ಯಾರ್ಥಿನಿಯರು ಬಸ್‍ನಲ್ಲಿ ಹೊರಟು ಹೋಗುತ್ತಾರೆ. ಇದಕ್ಕೆ ಅಕ್ರೋಶಗೊಂಡ ವಿದ್ಯಾರ್ಥಿಗಳು ಚಾಲಕ, ನಿರ್ವಾಹಕರ ಮೇಲೆ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ. ಈ ಹಲ್ಲೆ ಸಂಬಂಧ ಆನೇಕಲ್ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು, ಹಲ್ಲೆ ನಡೆಸಿದ ವಿದ್ಯಾರ್ಥಿಯ ಬೈಕ್ ವಶಕ್ಕೆ ಪಡೆದಿರುವ ಪೊಲೀಸರು ವಿದ್ಯಾರ್ಥಿಗಾಗಿ ಹುಡುಕಾಟ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

driver BMTC ವಿದ್ಯಾರ್ಥಿ ಹುಡುಕಾಟ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ