'ಬಿಜೆಪಿ 2ನೇ ಪಟ್ಟಿ 15ರಂದು ಬಿಡುಗಡೆ'

BJP

13-04-2018

ಹುಬ್ಬಳ್ಳಿಯಲ್ಲಿ ಬಿಜೆಪಿ ಮುಖಂಡರೊಂದಿಗೆ ಸುಧೀರ್ಘ ಸಭೆ ನಡೆಸಿದ ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಷಾ, ಅಭ್ಯರ್ಥಿಗಳ ಆಯ್ಕೆ ಹಾಗೂ ಚುನಾವಣಾ ಕಾರ್ಯತಂತ್ರಗಳ ಬಗ್ಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ. ರಾಜ್ಯ ಚುನಾವಣಾ ಉಸ್ತುವಾರಿ ಪ್ರಕಾಶ್ ಜಾವಡೇಕರ್, ಪೀಯೂಷ್ ಗೋಯಲ್, ಬಿಎಸ್ ಯಡಿಯೂರಪ್ಪ, ಜಗದೀಶ್ ಶೆಟ್ಟರ್, ಪ್ರಹ್ಲಾದ್  ಜೋಶಿ ಸೇರಿದಂತೆ ಹಿರಿಯ ನಾಯಕರು ಸಭೆಯಲ್ಲಿ ಪಾಲ್ಗೊಂಡಿದ್ದರು. ಈ ಸಭೆಗಾಗಿಯೇ ಪ್ರಕಾಶ್ ಜಾವಡೇಕರ್ ಹಾಗೂ ಪೀಯೂಷ್ ಗೋಯಲ್ ಅವರನ್ನು ಕರೆಸಲಾಗಿತ್ತು.

ಸಭೆಯ ನಂತರ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ, ಏಪ್ರಿಲ್ 15ರಂದು ಅಭ್ಯರ್ಥಿಗಳ ಎರಡನೇ ಪಟ್ಟಿ ಬಿಡುಗಡೆ ಮಾಡಲಾಗುವುದು ಎಂದು ತಿಳಿಸಿದರು. ಇತ್ತ ಅಮಿತ್ ಷಾ ಅವರನ್ನು ಧಾರವಾಡ, ಹಾವೇರಿ ಹಾಗೂ ಸುತ್ತಮುತ್ತಲಿನ ಜಿಲ್ಲೆಗಳ ಟಿಕೆಟ್ ಆಕಾಂಕ್ಷಿ ಗಳು ಭೇಟಿ ಮಾಡಿದರು.


ಸಂಬಂಧಿತ ಟ್ಯಾಗ್ಗಳು

second list election ಮಾಧ್ಯಮ ಆಕಾಂಕ್ಷಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ