ಮಳವಳ್ಳಿಯಲ್ಲಿ ವಿಶ್ವನಾಥ್‌ಗೆ ಘೇರಾವ್!

villagers protest against h.vishwanath at malavalli

14-04-2018

ಮಂಡ್ಯ: ಮಾಜಿ ಸಿಎಂ ಹೆಚ್.ಡಿ.ಕುಮಾರ ಸ್ವಾಮಿ ಅವರು ದಿ.ಡಿವೈಎಸ್ಪಿ ಕಲ್ಲಪ್ಪ ಹಂಡಿಬಾಗ್ ಅವರ ಪತ್ನಿ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆ, ಜೆಡಿಎಸ್ ಅಭ್ಯರ್ಥಿಪರ ಪ್ರಚಾರಕ್ಕೆ ಬಂದಿದ್ದ ಮಾಜಿ ಸಚಿವ ಹೆಚ್.ವಿಶ್ವನಾಥ್ಗೆ ಅಡ್ಡಿಪಡಿಸಿದ ಘಟನೆ ತಡವಾಗಿ ಬೆಳಕಿಗೆ ಬಂದಿದೆ.

ಕಳೆದೆ ಏಪ್ರಿಲ್ 12ರಂದು ಜೆಡಿಎಸ್ ಅಭ್ಯರ್ಥಿ ಕೆ.ಅನ್ನದಾನಿ ಪರ ಪ್ರಚಾರಕ್ಕೆಂದು ಜಿಲ್ಲೆಯ ಮಳವಳ್ಳಿ ತಾಲ್ಲೂಕಿನ ಮಂಚನಹಳ್ಳಿ ಗ್ರಾಮಕ್ಕೆ ಆಗಮಿಸಿದ್ದ ಹೆಚ್.ವಿಶ್ಚನಾಥ್ ಅವರ ಕಾರನ್ನು ಅಡ್ಡಹಾಕಿ ವಾಪಾಸ್ ಕಳುಹಿಸಿದ್ದಾರೆ. ಕಲ್ಲಪ್ಪ ಹಂಡಿಬಾಗ್ ಪತ್ನಿ ವಿರುದ್ಧ ಮಾತನಾಡಿರೋದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಗ್ರಾಮಸ್ಥರು ಅಲ್ಲಿಂದ ವಾಪಸ್ ತೆರಳುವಂತೆ ಸೂಚಿಸಿದ್ದಾರೆ. ಮರು ಮಾತನಾಡದ ವಿಶ್ವನಾಥ್ ಅಲ್ಲಿಂದ ಕಾಲ್ಕಿತ್ತಿದ್ದಾರೆ ಎಂದು ತಿಳಿದು ಬಂದಿದೆ.


ಸಂಬಂಧಿತ ಟ್ಯಾಗ್ಗಳು

H.Vishwanath JDS ಅವಹೇಳನ ಪ್ರಚಾರ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ