ಬಿಜೆಪಿ ಮುಖಂಡರ ವಿರುದ್ಧ ಪಾಲಿಕೆ ಸದಸ್ಯೆ ದೂರು

pratibha kulai Complaint against BJP leaders

14-04-2018

ಮಂಗಳೂರು: ಮಂಗಳೂರು ಪಾಲಿಕೆ ಸದಸ್ಯೆ ಪ್ರತಿಭಾ ಕುಳಾಯಿ ಅವರು, ಬಿಜೆಪಿ ನಾಯಕರ ವಿರುದ್ಧ ಮಂಗಳೂರು ಕೋರ್ಟ್ ನಲ್ಲಿ ಕೇಸು ದಾಖಲಿಸಿರುವುದು ಬೆಳಕಿಗೆ ಬಂದಿದೆ.  ಬಿಜೆಪಿ ಬಿಡುಗಡೆ ಮಾಡಿದ ಚಾರ್ಜ್ ಶೀಟ್ ನಲ್ಲಿ ತನ್ನ ಫೋಟೋ ಬಳಸಿ ಮಾನಹಾನಿ ಮಾಡಿರುವುದಾಗಿ ಆರೋಪಿಸಿ, ಕೇಂದ್ರ ಸಚಿವ ರವಿಶಂಕರ್ ಪ್ರಸಾದ್, ಬಿ.ಎಸ್.ಯಡಿಯೂರಪ್ಪ, ಶೋಭಾ ಕರಂದ್ಲಾಜೆ ಹಾಗು ರಾಷ್ಟ್ರೋತ್ಥಾನ ಮುದ್ರಣಾಲಯದ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ. ಸೆಕ್ಷನ್ 499, 500 ಹಾಗೂ ಐಪಿಸಿ 34 ಕಾಯ್ದೆಯಡಿ ಮಂಗಳೂರಿನ ಎರಡನೇ ಜೆಎಂಎಫ್ ಸಿ ಕೋರ್ಟ್ ನಲ್ಲಿ ಪ್ರಕರಣ ದಾಖಲಿಸಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ