ರೌಡಿಗಳಿಗೆ ಚೆನ್ನಣ್ಣನವರ್ ಖಡಕ್ ಎಚ್ಚರಿಕೆ

Chennannnavar Khadak warns of rowdy

14-04-2018

ಬೆಂಗಳೂರು: ಕೊಲೆ, ಸುಲಿಗೆ, ದರೋಡೆ,ಹಲ್ಲೆ ಸೇರಿದಂತೆ 16 ಕ್ಕೂ ಹೆಚ್ಚು ಗಂಭೀರ ಅಪರಾಧ ಪ್ರಕರಣಗಳಲ್ಲಿ ಭಾಗಿ ಸಾರ್ವಜನಿಕರಿಗೆ ಉಪಟಳ ನೀಡುತ್ತಿದ್ದ ರೌಡಿ ಗಾಳ ಅಲಿಯಾಸ್ ಗಾಳಪ್ಪನನ್ನು ಪಶ್ಚಿಮ ವಿಭಾಗದ ಪೊಲೀಸರು ಗೂಂಡಾ ಕಾಯ್ದೆಯಡಿ ಬಂಧಿಸಿದ್ದಾರೆ.

ಕೆಂಗೇರಿಯಲ್ಲಿ 13,ತಾವರೆಕೆರೆಯಲ್ಲಿ 2,ಹಾರೋಹಳ್ಳಿಯಲ್ಲಿ 1 ಸೇರಿ 16 ಅಪರಾಧ ಪ್ರಕರಣಗಳಲ್ಲಿ ಭಾಗಿಯಾಗಿದ್ದ ಕೆಂಗೇರಿ ಹೋಬಳಿಯ ರೌಡಿ ಗಾಳಪ್ಪ(37)ಕೆಂಗೇರಿ ಪೊಲೀಸ್ ಠಾಣೆಯ ರೌಡಿಪಟ್ಟಿಯಲ್ಲಿದ್ದಾನೆ.

ಹಲವು ಪ್ರಕರಣಗಳಲ್ಲಿ ಜೈಲಿಗೆ ಹೋಗಿ ಬಿಡುಗಡೆಯಾಗಿ ಬಂದರೂ ಮತ್ತೆ ಅಪರಾಧ ಕೃತ್ಯಗಳನ್ನು ನಡೆಸುತ್ತಿದ್ದ ಗಾಳಪ್ಪನನ್ನು ಗೂಂಡಾ ಕಾಯ್ದೆಯಡಿ ಬಂಧಿಸಿ ಜೈಲಿಗೆ ಕಳುಹಿಸಲಾಗಿದೆ ಎಂದು ಪಶ್ಚಿಮ ವಿಭಾಗದ ಡಿಸಿಪಿ ರವಿ ಚೆನ್ನಣ್ಣನವರ್ ತಿಳಿಸಿದ್ದಾರೆ. ಪಶ್ಚಿಮ ವಿಭಾಗದಲ್ಲಿ ರೌಡಿಗಳು ಅಪರಾಧ ಕೃತ್ಯಗಳಲ್ಲಿ ಭಾಗಿಯಾಗುವುದಾಗಲಿ ಕಾನೂನು ಕೈಗೆತ್ತಿಕೊಂಡು ಸಮಾಜದ ಶಾಂತಿಗೆ ಭಂಗ ತರುವುದಾಗಲಿ ಮಾಡಿದರೆ ಅಂತಹವರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಎಚ್ಚರಿಕೆ ನೀಡಿದ್ದಾರೆ.


ಸಂಬಂಧಿತ ಟ್ಯಾಗ್ಗಳು

Rowdy ravi d channannavar ಪ್ರಕರಣ ಅಪರಾಧ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ