ಕಾಂಗ್ರೆಸ್ ಶಾಸಕನ ಮನೆ ಮೇಲೆ ಐಟಿ ದಾಳಿ

IT Raid on congress MLA B shivanna

16-04-2018

ಬೆಂಗಳೂರು: ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷದ ಶಾಸಕರು, ಸಚಿವರು ಹಾಗೂ ಮುಖಂಡರ ಮನೆ ಹಾಗೂ ಕಚೇರಿಗಳ ಮೇಲೆ ಆದಾಯ ತೆರಿಗೆ ಇಲಾಖೆ ಉದ್ದೇಶಪೂರ್ವಕವಾಗಿ ದಾಳಿ ನಡೆಸುತ್ತಿದೆ ಎನ್ನುವ ಟೀಕೆಗಳ ನಡುವೆ ಇಂದು ಕಾಂಗ್ರೆಸ್ ಶಾಸಕರ ಮನೆ ಮೇಲೆ ಆದಾಯ ತೆರಿಗೆ ದಾಳಿ ನಡೆದಿದೆ.

ಆನೇಕಲ್ ಶಾಸಕ ಬಿ.ಶಿವಣ್ಣ ಮನೆ ಹಾಗೂ ಕಚೇರಿ ಮೇಲೆ ಬೆಳಗಿನಿಂದಲೇ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಆನೇಕಲ್ ತಾಲ್ಲೂಕಿನ ಚಂದಾಪುರ ಸಮೀಪವಿರುವ ಸೂರ್ಯಸಿಟಿಯಲ್ಲಿರುವ ಶಾಸಕ ಶಿವಣ್ಣ ಅವರ ಮನೆ ಹಾಗೂ ಕಚೇರಿ ಮೇಲೆ ದಾಳಿ ನಡೆಸಿ ದಾಖಲೆಗಳ ಪರಿಶೀಲನೆ ನಡೆಸಿದ್ದಾರೆ. ಆನೇಕಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯು ಗೆಲ್ಲುವ ಸೂಚನೆ ಸಿಕ್ಕಿದ್ದು ಈ ಹಿನ್ನೆಲೆ ಬಿಜೆಪಿ ಪ್ರೇರಿತ ಐಟಿ ದಾಳಿ ನಡೆದಿದೆ ಎಂದು ಶಾಸಕರ ಬೆಂಬಲಿಗರು ಆರೋಪಿಸುತ್ತಿದ್ದಾರೆ.

ಇನ್ನು ಈ ವೇಳೆ ಮಾತನಾಡಿದ ಬಿ.ಶಿವಣ್ಣ, ಇದು ರಾಜಕೀಯ ಪ್ರೇರಿತ ದಾಳಿ ಎಂದು ದೂರಿದ್ದಾರೆ. ನಾಳೆ ನಾಮಪತ್ರ ಸಲ್ಲಿಕೆಯ ಹಿನ್ನೆಲೆ ದಾಳಿ ಮಾಡಿಸಿದ್ದಾರೆ, ಏಕಾಏಕಿ ದಾಳಿಯಿಂದ ವಿಚಲಿತನಾಗಲ್ಲ, ಸಂಪೂರ್ಣ ತನಿಖೆ ನಂತರ ಸತ್ಯಾಸತ್ಯತೆ ಹೊರಬೀಳುತ್ತದೆ. ಮತದಾರರು ಎಲ್ಲವನ್ನೂ ನೋಡುತ್ತಿದ್ದಾರೆ, ಜನಸಾಗರದ ಅಲೆಗೆ ಈ ದಾಳಿ ಹಿಂದಿನ ಶಕ್ತಿಗಳು ತತ್ತರಿಸುತ್ತವೆ ಎಂದು ನುಡಿದಿದ್ದಾರೆ.

ಇನ್ನೊಂದೆಡೆ ಚಿಕ್ಕಮಗಳೂರು ಜಿಲ್ಲೆಯ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷನ ಮನೆ ಮೇಲೆ‌ ಐ.ಟಿ‌ ಆಧಿಕಾಗಳು ದಾಳಿ ನಡೆಸಿದ್ದಾರೆ. ಕೊಪ್ಪದಲ್ಲಿನ ಬ್ಲಾಕ್ ಕಾಂಗ್ರೆಸ್ ತಾಲ್ಲೂಕು ಅಧ್ಯಕ್ಷ  ಸುಧೀರ್ ಕುಮಾರ್ ಮುರುಳಿ ಸೇರಿದಂತೆ ‌ಕಾಂಗ್ರೆಸ್ ಮುಖಂಡರಾದ, ಸುಬ್ರಹ್ಮಣ್ಯ ಶೆಟ್ಟಿ, ಸತೀಶ್ ಅವರ ನಿವಾಸಗಳ ಮೇಲೆ‌ ಐಟಿ ದಾಳಿ ಮಾಡಿದ್ದಾರೆ. ಮೂವರೂ ಕಾಂಗ್ರೆಸ್ ‌ಮುಖಂಡರ ಮನೆಯಲ್ಲಿ ದಾಖಲೆ ಪತ್ರಗಳ ಪರಿಶೀಲನೆ ನಡೆಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

MLA B.shivanna ಮುಖಂಡ ಐಟಿ ದಾಳಿ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ