ಟಿಕೆಟ್ ಘೋಷಣೆಗೂ ಮುನ್ನವೇ ಬೆಂಬಲಿಗರ ಆಕ್ರೋಶ

Raichur: Supporters

16-04-2018

ರಾಯಚೂರು: ರಾಯಚೂರು ನಗರ ಕ್ಷೇತ್ರಕ್ಕೆ ಕಾಂಗ್ರೆಸ್ ಟಿಕೆಟ್ ಇನ್ನೂ ಘೋಷಣೆಯಾಗಿಲ್ಲ. ಹೀಗಿರುವಾಗ ಟಿಕೆಟ್ ಘೋಷಣೆಗೂ ಮುನ್ನವೇ ಟಿಕೆಟ್ ಆಕಾಂಕ್ಷಿಗಳ ಬೆಂಬಲಿಗರ ಆಕ್ರೋಶ ಭುಗಿಲೆದ್ದಿದೆ. ನಿನ್ನೆ ತಡರಾತ್ರಿ ನಗರದ ಅಂಬೇಡ್ಕರ್ ಸರ್ಕಲ್ ಬಳಿ ಯಾಸಿನ್ ಬೆಂಬಲಿಗರು ಪ್ರತಿಭಟಿಸಿದ್ದಾರೆ. ಯಾಸಿನ್ ಗೆ ಟಿಕೆಟ್ ನೀಡದಿದ್ದಲ್ಲಿ ಜಿಲ್ಲೆಯ ಏಳು ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ಕಾಂಗ್ರೆಸ್ಗೆ ಬೆಂಬಲಿಸುವುದಿಲ್ಲ ಎಂಬ ಎಚ್ಚರಿಕೆ ನೀಡಿದ್ದಾರೆ. ಇದೇ ವೇಳೆ ಎನ್.ಎಸ್. ಬೋಸರಾಜು ಪ್ರತಿಕೃತಿ ದಹಿಸಿ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಎನ್.ಎಸ್.ಬೋಸರಾಜು ರಾಯಚೂರು ನಗರ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಗಳಲ್ಲಿ ಒಬ್ಬರು. ಯಾಸಿನ್ ಪರ ಟಿಕೆಟ್ಗೆ ಒತ್ತಾಯಿಸಿ ಕಾಂಗ್ರೆಸ್ ಕಚೇರಿ ಎದುರು ಪ್ರತಿಭಟಿಸುವ ಎಚ್ಚರಿಕೆ ನೀಡಿದ್ದಾರೆ ಯಾಸಿನ್ ಬೆಂಬಲಿಗರು.


ಸಂಬಂಧಿತ ಟ್ಯಾಗ್ಗಳು

minorities ticket ಎನ್.ಎಸ್.ಬೋಸರಾಜು ಬೆಂಬಲ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ