ನಾಮ ಪತ್ರ ಸಲ್ಲಿಕೆ ಇಂದಿನಿಂದ

karnataka election: nomination can file from today

17-04-2018

ಬೆಂಗಳೂರು: ಮುಂದಿನ ತಿಂಗಳು ಅಂದರೆ ಮೇ 12ರಂದು ರಾಜ್ಯದ 224 ವಿಧಾನಸಭಾ ಕ್ಷೇತ್ರಗಳಿಗೆ ಏಕ ಕಾಲಕ್ಕೆ ನಡೆಯಲಿರುವ ಚುನಾವಣೆಗೆ ಇಂದು ಅಧಿಸೂಚನೆ ಹೊರಡಿಸಲಾಗಿದ್ದು, ನಾಮಪತ್ರ ಸಲ್ಲಿಕೆ ವಿಧ್ಯುಕ್ತವಾಗಿ ಆರಂಭಗೊಂಡಿದೆ.

ಉಮೇದುವಾರಿಕೆ ಸಲ್ಲಿಸಲು ಈ ತಿಂಗಳ 24ಕಡೆಯ ದಿನವಾಗಿದೆ. ಬೆಳಿಗ್ಗೆ 11ಗಂಟೆಯಿಂದ ಮಧ್ಯಾಹ್ನ 3 ಗಂಟೆಯವರೆಗೆ ನಾಮಪತ್ರ ಸಲ್ಲಿಸಲು ಅವಕಾಶವಿದ್ದು, ಅಭ್ಯರ್ಥಿಯ ಜೊತೆಯಲ್ಲಿ ಐವರು ಬೆಂಬಲಿಗರಿಗೆ ಮಾತ್ರ ಚುನಾವಣಾಧಿಕಾರಿಗಳ ಬಳಿ ತೆರಳಲು ಅವಕಾಶವಿದೆ.

ನಾಮಪತ್ರ ಸಲ್ಲಿಸಲು ಒಬ್ಬ ಅಭ್ಯರ್ಥಿ ಕೇವಲ ಮೂರು ವಾಹನಗಳ ಜೊತೆ ಮಾತ್ರ ಬರಬೇಕು. ಉಮೇದುವಾರಿಕೆ ಸಲ್ಲಿಸುವವರು ಬೇರೆ ಕ್ಷೇತ್ರದ ಅಭ್ಯರ್ಥಿ ಆಗಿದ್ದರೆ, ಎರಡು ರೀತಿಯ ಪ್ರಮಾಣಪತ್ರ ಸಲ್ಲಿಸಬೇಕು. ಅನುಸೂಚಿತ ಜಾತಿ ಮತ್ತು ಪಂಗಡದ ಅಭ್ಯರ್ಥಿಗಳು ಐದು ಸಾವಿರ ರೂಪಾಯಿ ಹಾಗೂ ಇತರೆ ವರ್ಗದ ಅಭ್ಯರ್ಥಿಗಳು ಹತ್ತು ಸಾವಿರ ರೂಪಾಯಿ ಠೇವಣಿ ಹಣ ಪಾವತಿಸಬೇಕಿದೆ.

ಅಭ್ಯರ್ಥಿಗಳು ಹೊಸ ಬ್ಯಾಂಕ್ ಖಾತೆ ತೆರೆದು, ಹೊಸ ಖಾತೆಯ ಮೂಲಕವೇ ಚುನಾವಣಾ ಖರ್ಚು ವೆಚ್ಚ ಭರಿಸಬೇಕು ಎಂದು ಸೂಚಿಸಲಾಗಿದೆ.

ಕಾಂಗ್ರೆಸ್ ಪಕ್ಷದಿಂದ ಈಗಾಗಲೇ 218 ಅಭ್ಯರ್ಥಿಗಳ ಪಟ್ಟಿ ಬಿಡುಗಡೆ ಮಾಡಲಾಗಿದ್ದು, ಬಿಜೆಪಿ 154 ಮತ್ತು ಜಾತ್ಯತೀತ ಜನತಾದಳ 120 ಅಭ್ಯರ್ಥಿಗಳ ಪಟ್ಟಿಯನ್ನು ಈಗಾಗಲೇ ಬಿಡುಗಡೆ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪರ್ಧಿಸಲಿರುವ ಪ್ರತಿಷ್ಠಿತ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದಲ್ಲಿ ಸುದೀರ್ಘ ಸ್ಪರ್ಧಿಸುವ ಬಿಜೆಪಿ ಅಭ್ಯರ್ಥಿಯ ಹೆಸರನ್ನು ಇನ್ನೂ ಪ್ರಕಟಿಸಿಲ್ಲ. ಈ ಕ್ಷೇತ್ರದಲ್ಲಿ ಜೆಡಿಎಸ್‍ನಿಂದ ಜಿ.ಟಿ.ದೇವೇಗೌಡ ಕಣಕ್ಕಿಳಿಯಲಿದ್ದಾರೆ.ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ