ರಾಜ್ಯ ಚುನಾವಣೆ: 58 ಸಾವಿರ ಮತಗಟ್ಟೆಗಳ ಸಿದ್ಧತೆ

State Elections: election commission Prepared 58,000 polling Booths!

17-04-2018

ಬೆಂಗಳೂರು: ವಿಧಾನಸಭಾ ಚುನಾವಣೆಗೆ ರಾಜ್ಯದಲ್ಲಿ ಸುಮಾರು 58 ಸಾವಿರ ಮತಗಟ್ಟೆಗಳನ್ನು ಸಿದ್ದಪಡಿಸಲಾಗಿದ್ದು, ಈ ಎಲ್ಲಾ ಮತಗಟ್ಟೆಗಳಲ್ಲಿ ಸೂಕ್ತ ಮೂಲಭೂತ ಸೌಕರ್ಯ ಕಲ್ಪಿಸಲಾಗಿದೆ. ಈ ಪೈಕಿ ಕೇವಲ 70 ಮತಗಟ್ಟೆಗಳಲ್ಲಿ ಶೌಚಾಲಯ ಮತ್ತಿತರ ಕೆಲ ಸೌಲಭ್ಯದ ಕೊರತೆಯಿದ್ದು, ಇದನ್ನು ಶೀಘ್ರದಲ್ಲೇ ನಿವಾರಣೆ ಮಾಡುವಂತೆ ಸಂಬಂಧಪಟ್ಟ ಜಿಲ್ಲಾ ಚುನಾವಣಾಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.

ಮತಗಟ್ಟೆಗಳ ಭೌತಿಕ ಪರಿಶೀಲನೆ ಪೂರ್ಣಗೊಂಡಿದ್ದು, ಎಲ್ಲಾ ಮತಗಟ್ಟೆಗಳನ್ನು ನೆಲ ಮಹಡಿಯಲ್ಲಿಯೇ ಸ್ಥಾಪಿಸಲಾಗಿದೆ. ದಿವ್ಯಾಂಗರಿಗೆ ಅನುಕೂಲವಾಗುವಂತೆ ರ್ಯಾಂಪ್ ವ್ಯವಸ್ಥೆ ಮಾಡಲಾಗಿದ್ದು, ಪ್ರತಿಯೊಂದು ವಿಧಾನಸಭಾ ಕ್ಷೇತ್ರದ ಒಂದು ಮತಗಟ್ಟೆಯಲ್ಲಿ ಸಂಪೂರ್ಣವಾಗಿ ಮಹಿಳಾ ಚುನಾವಣಾಧಿಕಾರಿಗಳನ್ನೇ ನಿಯೋಜಿಸಲಾಗುತ್ತಿದೆ. ಮಹಿಳಾ ಸಿಬ್ಬಂದಿ ಸೇರಿದಂತೆ ಎಲ್ಲರಿಗೂ ಸೂಕ್ತ ರಕ್ಷಣೆ ಹಾಗೂ ವ್ಯವಸ್ಥೆ ಕಲ್ಪಿಸಲು ಚುನಾವಣಾ ಆಯೋಗ ಈಗಾಗಲೇ ಕಾರ್ಯಯೋಜನೆ ಸಿದ್ದಪಡಿಸಿದೆ ಎಂದು ಚುನಾವಣಾಧಿಕಾರಿಗಳು ಮಾಹಿತಿ ನೀಡಿದ್ದಾರೆ.

ಪ್ರತಿಯೊಂದು ಮತಗಟ್ಟೆ ಬಳಿ ಆಯೋಗದಿಂದಲೇ ಹೆಲ್ಪ್ ಡೆಸ್ಕ್ ಅಂದರೆ ಸಹಾಯ ಕೇಂದ್ರ ಸ್ಥಾಪಿಸಲಾಗುತ್ತಿದೆ. ಮತದಾರರ ಕುಂದು ಕೊರತೆಗಳನ್ನು ಆಲಿಸಿ ಅವರಿಗೆ ಸೂಕ್ತ ಮಾರ್ಗದರ್ಶನ ನೀಡುವ ವ್ಯವಸ್ಥೆಯನ್ನು ಇಲ್ಲಿ ಕಲ್ಪಿಸಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.


ಸಂಬಂಧಿತ ಟ್ಯಾಗ್ಗಳು

officers EVM ನಿವಾರಣೆ ಮತಗಟ್ಟೆ


ಒಂದು ಕಮೆಂಟನ್ನು ಹಾಕಿ

ಟಾಪ್ ಪ್ರತಿಕ್ರಿಯೆಗಳು


ಇಲ್ಲ ಪ್ರತಿಕ್ರಿಯೆಗಳು ಕಂಡುಬಂದಿಲ್ಲ